ಮಂಗಳೂರು: ತಾನು ಇನ್ನು ಮುಂದೆ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗು ತ್ತಿದ್ದೇನೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಘೋಷಿಸಿದ್ದಾರೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿ ಸೋತ ಬಳಿಕ ನಗರದ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಚುನಾವಣಾ ರಾಜಕೀಯದಿಂದ ಮಾತ್ರ ದೂರವಿದ್ದು, ಪಕ್ಷದ ಚಟುವಟಿಕೆಯಲ್ಲಿ ಮುಂಚೂ ಣಿಯಲ್ಲಿರುತ್ತೇನೆ. ಲೋಕಸಭಾ ಚುನಾವಣೆ ಸ್ಪರ್ಧೆಗೆ ಸೂಚಿಸಿದ್ದಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ತಿಳಿಸಿದರು.
ಚುನಾವಣಾ ರಾಜಕೀಯದಿಂದ ಮಾತ್ರ ದೂರವಿರಲಿದ್ದೇನೆ. ಆದರೆ ಪಕ್ಷ ಎಂಎಲ್ಸಿ ಸೇರಿದಂತೆ ಇತರ ಅವಕಾಶಗಳನ್ನು ನೀಡಿ ದ್ದಲ್ಲಿ ಅದನ್ನು ಸ್ವೀಕರಿಸಲು ಸಿದ್ಧನಿದ್ದೇನೆ. ಇಷ್ಟು ವರ್ಷದ ರಾಜಕೀಯ ಜೀವನದಲ್ಲಿ ನಾನು ಪಕ್ಷಕ್ಕೆ ವಿರುದ್ಧವಾಗಿ ಎಂದೂ ನಡೆದುಕೊಂಡಿಲ್ಲ. ಆದ್ದರಿಂದ ಪಕ್ಷದ ತೀರ್ಮಾನಕ್ಕೆ ಬದ್ಧನಿದ್ಧೇನೆ ಎಂದು ಹೇಳಿದರು.
ಬಂಟ್ವಾಳದಲ್ಲಿ ತನಗೆ ಸಣ್ಣ ಅಂತರದಲ್ಲಿ ಸೋಲಾಗಿದೆ. ನಾನು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ನಮ್ಮ ಪಕ್ಷದಿಂದಲೇ ಅಪಸ್ವರ ಕೇಳಿ ಬಂದಿತ್ತು. ಆದ್ದರಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ.
ಈ ಬಾರಿಯ ನನ್ನ ಸೋಲಿನ ಅವಲೋಕನವನ್ನು ಮಾಡಿದ್ದೇನೆ. ಚುನಾವಣೆ ನಾವು ಗ್ರಹಿಸಿದ ರೀತಿಯಿಲ್ಲ. ನನಗೆ ಚುನಾವಣೆ ಯಲ್ಲಿ ಗೆಲ್ಲುವ ವಿಶ್ವಾಸವಿತ್ತು. ಸಮೀಕ್ಷೆಗಳೂ ಗೆಲ್ಲುವ ರೀತಿಯೇ ಬಂದಿದ್ದವು. ಆದರೆ ಹಿನ್ನಡೆಯಾಗಿದೆ ಎಂದರು.
ಮಾಜಿ ಸಚಿವ ಯು ಟಿ ಖಾದರ್ ಅವರು ಮಾತನಾಡಿ ರಮಾನಾಥ ರೈ ಅವರನ್ನು ರಾಜಕೀಯದಿಂದ ನಿವೃತ್ತಿಯಾಗಲು ನಾವು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.
ರಮಾನಾಥ ರೈ ಅವರು ಹಿರಿಯ ನಾಯಕರು. ಜಿಲ್ಲೆಯ ಅಭಿವೃದ್ಧಿಗೆ ಅಪಾರ ಕೊಡುಗೆ ಕೊಟ್ಟವರು. ಪ್ರಾಮಾಣಿಕ ರಾಜಕೀಯ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರು ನಿವೃತ್ತಿಯಾಗಲು ಜನತೆ ಮತ್ತು ಪಕ್ಷ ಎಂದಿಗೂ ಬಿಡುವುದಿಲ್ಲ. ರಾಜಕೀಯ ದಲ್ಲಿ ಯಾವಾಗಲೂ ಇರುತ್ತಾರೆ. ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಲು ನಾವು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.