ಪ್ರಧಾನಮಂತ್ರಿಯವರು ಮೊದಲು ಜಪಾನ್‌ನ ಹಿರೋಷಿಮಾಕ್ಕೆ ಮೇ 19 ರಿಂದ 21 ರವರೆಗೆ ಭೇಟಿ ನೀಡಲಿದ್ದು, ಜಪಾನಿನ ಪ್ರೆಸಿಡೆನ್ಸಿಯ ಅಡಿಯಲ್ಲಿ G7 ಮುಂದುವರಿದ ಆರ್ಥಿಕತೆಗಳ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ಅವರು ಜಪಾನ್‌ಗೆ ಭೇಟಿ ನೀಡುತ್ತಿದ್ದಾರೆ.
ಅವರು ಜಪಾನ್‌ನಲ್ಲಿ ಜಿ 7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಪಪುವಾ ನ್ಯೂಗಿನಿಯಾಗೆ ತೆರಳಲಿದ್ದಾರೆ. ಇದು ಪಪುವಾ ನ್ಯೂಗಿನಿಯಾಗೆ ಭಾರತದ ಪ್ರಧಾನಿಯ ಮೊದಲ ಭೇಟಿಯಾಗಿದೆ. ಅವರು ಪಪುವಾ ನ್ಯೂಗಿನಿಯಾದಲ್ಲಿ ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರಕ್ಕಾಗಿ ವೇದಿಕೆಯ (ಎಫ್‌ಐಪಿಐಸಿ) ಮೂರನೇ ಶೃಂಗಸಭೆಯ ಸಹ-ಅಧ್ಯಕ್ಷರಾಗಿರುತ್ತಾರೆ.
ಮೂರನೇ ಹಂತದಲ್ಲಿ ಪ್ರಧಾನಿ ಮೋದಿ ಅವರು ಆಸ್ಟ್ರೇಲಿಯಾದ ಸಿಡ್ನಿಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.