ಮಸ್ಕತ್ನಿಂದ ಆಗಮಿಸಿದ ಭಾರತೀಯ ಪ್ರಜೆಗಳನ್ನು ವಿಮಾನ ನಿಲ್ದಾಣದಲ್ಲಿ ಪರಿಶೀಲಿಸಿ ದಾಗ ಚಿನ್ನದ ಧೂಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅವರನ್ನುಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಪ್ರಯಾಣಿಕರು ಧರಿಸಿರುವ ಜೀನ್ಸ್, ಒಳ ಉಡುಪುಗಳು ಮತ್ತು ಮೊಣಕಾಲಿನ ಕ್ಯಾಪ್ಗಳ ಒಳಗೆ ಹೊಲಿದ ಪ್ಯಾಕೆಟ್ಗಳಲ್ಲಿ ತುಂಬಿಸಿ ಸಾಗಿಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಚಿನ್ನವನ್ನು ವಶಪಡಿಸಿಕೊಂಡಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಈ ಹಿಂದೆ, ಮುಂಬೈ ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ವಿದೇಶಿ ಮೂಲದ ಸಿಗರೇಟ್ಗಳನ್ನು ಕಳ್ಳಸಾಗಣೆ ಮಾಡಿದ 55 ಪ್ರಕರಣಗಳನ್ನು ದಾಖಲಿಸಿದೆ ಮತ್ತು 41 ಲಕ್ಷ ರೂಪಾಯಿ ಮೌಲ್ಯದ ಸುಮಾರು 9,36,700 ಸಿಗರೇಟ್ಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.