Wednesday, 18th December 2024

ಸರಳತೆ ಮೆರೆದ ಶಾಸಕ ದರ್ಶನ್​ ಪುಟ್ಟಣ್ಣಯ್ಯ

ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ದರ್ಶನ್​ ಪುಟ್ಟಣ್ಣಯ್ಯ ಗಮನ ಸೆಳೆದಿದ್ದಾರೆ.

ದರ್ಶನ್​ ಪುಟ್ಟಣ್ಣಯ್ಯ ಅವರು ಪ್ರಮಾಣ ವಚನ ಕಾರ್ಯಕ್ರಮಕ್ಕೆ ರೈಲಿನಲ್ಲಿ ಆಗಮಿಸುವ ಮೂಲಕ ಸರಳತೆ ಮೆರೆದಿದ್ದಾರೆ. ಮಂಡ್ಯದಿಂದ ಸಾಮಾನ್ಯ ಪ್ರಜೆಯಂತೆ ರೈಲಿನಲ್ಲಿ ಆಗಮಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​ ಅವರ ಆಹ್ವಾನ‌ದ ಮೇರೆಗೆ ದರ್ಶನ್​, ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದಾರೆ.

ಶನಿವಾರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮತ್ತು ಡಿ.ಕೆ. ಶಿವಕುಮಾರ್​ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸ ಲಿದ್ದಾರೆ. ಈಗಾಗಲೇ ಕಾಂಗ್ರೆಸ್​ ಪಕ್ಷದ ಶಾಸಕರು ಮತ್ತು ಅತಿಥಿಗಳು ರಾಜಧಾನಿಗೆ ಆಗಮಿಸಿದ್ದಾರೆ.

ದರ್ಶನ್​ ಪುಟ್ಟಣ್ಣಯ್ಯ ಅವರು ಪುಟ್ಟರಾಜು ವಿರುದ್ಧ ಜಯ ದಾಖಲಿಸಿದರು. ಸರ್ವೋ ದಯ ಕರ್ನಾಟಕ ಪಕ್ಷದಿಂದ ದರ್ಶನ್​ ಸ್ಪರ್ಧಿಸಿದರು. ಅವರ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಕಾಂಗ್ರೆಸ್​ ಬೆಂಬಲ ನೀಡಿತು.