Sunday, 10th November 2024

490 ಜನರಲ್ಲಿ ಸೋಂಕು ಪತ್ತೆ

ವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 490 ಜನರಲ್ಲಿ ಹೊಸ ದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,31,856 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 5,707 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,44,51,353 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 01,380 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,04,252 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,24,753 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.