Friday, 22nd November 2024

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಚಾಲನೆ ಕಾರ್ಯಕ್ರಮ ರದ್ದು

ಮುಂಬಯಿ: ಶನಿವಾರ ಉದ್ಘಾಟನೆಯಾಗಬೇಕಿದ್ದ ಮುಂಬೈ-ಗೋವಾ ನಡುವಿನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಚಾಲನೆ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್‌ ಮಾದರಿಯಲ್ಲಿ ಉದ್ಘಾಟಿಸಬೇಕಿತ್ತು. ಆದರೆ ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ದುರಂತದ ಹಿನ್ನೆಲೆಯಲ್ಲಿ ಈ ಉದ್ಘಾಟನಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೇ ಸಚಿವ ಅಶ್ವಿ‌ನಿ ವೈಷ್ಣವ್‌ ತಿಳಿಸಿದ್ದಾರೆ.

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸುಮಾರು 280ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.