Monday, 6th January 2025

ತೆರೆದ ಬೋರ್ ವೆಲ್ ಗೆ ಬಿದ್ದ ಬಾಲಕಿ: ಕಾರ್ಯಾಚರಣೆ ಆರಂಭ

ಜಾಮ್‌ನಗರ: ತೆರೆದ ಬೋರ್ ವೆಲ್ ಗೆ 2 ವರ್ಷದ ಬಾಲಕಿ ಬಿದ್ದಿರುವ ಆಘಾತಕಾರಿ ಘಟನೆ ಗುಜರಾತ್‌ನ ಜಾಮ್‌ನಗರ ಜಿಲ್ಲೆಯಿಂದ ವರದಿಯಾಗಿದೆ.

ಕೃಷಿ ಜಮೀನಿನಲ್ಲಿ ಪಾಳುಬಿದ್ದ ತೆರೆದ ಬೋರ್‌ವೆಲ್‌ಗೆ ಬಿದ್ದು 20 ಅಡಿ ಆಳದಲ್ಲಿ ಬಾಲಕಿ ಸಿಲುಕಿಕೊಂಡಿದ್ದಾಳೆ. ಆಟವಾಡುತ್ತಿದ್ದ ವೇಳೆ ಮಗು ಬಿದ್ದಿದ್ದು, ಸ್ಥಳೀಯ ಅಧಿಕಾರಿಗಳು ಮಗುವನ್ನು ರಕ್ಷಿಸುವಲ್ಲಿ ನಿರತರಾಗಿದ್ದಾರೆ.

ಜಾಮ್‌ನಗರದಿಂದ 40 ಕಿ.ಮೀ ದೂರದಲ್ಲಿರುವ ತಮಚನ್ ಗ್ರಾಮದ ಜಮೀನಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಬುಡಕಟ್ಟು ಕುಟುಂಬಕ್ಕೆ ಸೇರಿದ ಪುಟ್ಟ ಮಗು ಆಟವಾಡುತ್ತಿದ್ದ ವೇಳೆ ಸುಮಾರು 200 ಅಡಿ ಆಳದ ಕೊಳವೆಬಾವಿಗೆ ಬಿದ್ದಿದೆ.

ಜಾಮ್‌ನಗರದಿಂದ ಬಂದಿರುವ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಬಳಸಿಕೊಂಡು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೇವೆ ಎಂದು ಸರ್ವಯ್ಯ ತಿಳಿಸಿದ್ದಾರೆ.