Thursday, 31st October 2024

ಪೊಲೀಸ್ ಠಾಣೆಯ ಫೇಸ್‌ಬುಕ್ ಅಕೌಂಟ್​ ಹ್ಯಾಕ್​

ಹೈದರಾಬಾದ್: ಠಾಣೆಯೊಂದರ ಫೇಸ್‌ಬುಕ್ ಖಾತೆ ಹ್ಯಾಕ್ ಮಾಡಿದ ಅಪರಿಚಿತ ದುಷ್ಕರ್ಮಿಗಳು ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಘಟನೆ ಹೈದರಾಬಾದ್​ನಲ್ಲಿ ಬೆಳಕಿಗೆ ಬಂದಿದೆ.

ಹೈದರಾಬಾದ್ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಆಸಿಫ್‌ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಫೇಸ್‌ಬುಕ್ ಅಕೌಂಟ್​ ಚೆಕ್​ ಮಾಡಿದಾಗ ವಿಷಯ ತಿಳಿದು ಬಂದಿದ್ದು, ಕೂಡಲೇ ಎಚ್ಚೆತ್ತ ಪೊಲೀಸರು ಖಾತೆ ಸ್ಥಗಿತಗೊಳಿಸಿ ದ್ದಾರೆ.

“ಆಸಿಫ್​ನಗರ ಠಾಣೆಯ ಕಾನ್ಸ್​ಟೇಬಲ್ ರವೀಂದರ್ ಬಾಬು ಅವರು ಠಾಣೆಯ ಅಧಿಕೃತ ಫೇಸ್ ಬುಕ್ ಖಾತೆಗೆ ಬುಧವಾರ ರಾತ್ರಿ ಲಾಗ್ ಇನ್ ಆಗಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೆಲ ನಿಮಿಷಗಳ ನಂತರ ಮತ್ತೆ ಲಾಗಿನ್​ ಆಗಲು ಪ್ರಯತ್ನಿಸಿದ್ದು, ಆಗ ಕೂಡ ಸಮಸ್ಯೆ ಕಂಡು ಬಂದಿದೆ. ಬಳಿಕ ತಮ್ಮ ಫೋನ್‌ನಲ್ಲಿ ಖಾತೆ ಪರಿಶೀಲಿಸಿದಾಗ ಐದು ಅಶ್ಲೀಲ ವಿಡಿಯೋಗಳನ್ನು ಅಪ್ಲೋಡ್​ ಮಾಡಿರುವುದು ಕಂಡು ಬಂದಿದೆ. ಕೂಡಲೇ ಮೇಲಧಿಕಾರಿಗಳಿಗೆ ವಿಷಯ ತಿಳಿಸಿದ್ದು, ಅಕೌಂಟ್ ಹ್ಯಾಕ್ ಆಗಿರುವುದು ಪತ್ತೆಯಾಗಿದೆ.