Saturday, 23rd November 2024

‘ಬಿಪೊರ್ಜೋಯ್’ ಚಂಡಮಾರುತ ಭೀತಿ: 24 ಗಂಟೆಗಳಲ್ಲಿ ಮತ್ತಷ್ಟು ತೀವ್ರ

ನವದೆಹಲಿ: ‘ಬಿಪೊರ್ಜೋಯ್’ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ.

ಪ್ರಸ್ತುತ ಗೋವಾದಿಂದ ಪಶ್ಚಿಮಕ್ಕೆ 690 ಕಿಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿಮೀ ಮತ್ತು ಪೋರ ಬಂದರ್ನಿಂದ ನೈಋತ್ಯಕ್ಕೆ 640 ಕಿಮೀ ದೂರದಲ್ಲಿ ನೆಲೆಸಿರುವ ಚಂಡಮಾರುತವು ಗಂಟೆಗೆ 145 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಮೂರು ರಾಜ್ಯಗಳಲ್ಲಿ ಭಾರೀ ಮಳೆ, ಎಚ್ಚರಿಕೆ: ಚಂಡಮಾರುತವು ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಯನ್ನು ಉಂಟು ಮಾಡಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಗುಜರಾತ್, ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ. ಕೇರಳದ ಎಂಟು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

‘ಬಿಪೊರ್ ಜಾಯ್’ ಚಂಡಮಾರುತದ ನಿರೀಕ್ಷೆಯಲ್ಲಿ, ಅರಬ್ಬಿ ಸಮುದ್ರದ ಕರಾವಳಿಯ ವಲ್ಸಾದ್ನ ತಿಥಾಲ್ ಬೀಚ್ನಲ್ಲಿ ಎತ್ತರದ ಎಲೆಗಳು ಉಂಟಾಗಿವೆ. ಮುಂಜಾಗ್ರತಾ ಕ್ರಮವಾಗಿ ತಿಥಾಲ್ ಬೀಚ್ ನ್ನು ಜೂನ್ 14 ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ಮುಚ್ಚಲಾಗಿದೆ.

ತಿಥಾಲ್ ಬೀಚ್ ಗೆ ಎಚ್ಚರಿಕೆ: ಬಿಪೊರ್ಜೋಯ್ ಚಂಡಮಾರುತದ ನಿರೀಕ್ಷೆಯಲ್ಲಿ ಹೆಚ್ಚಿನ ಅಲೆಗಳು ಮತ್ತು ಬಲವಾದ ಗಾಳಿಯಿಂದಾಗಿ ಅರೇಬಿಯನ್ ಸಮುದ್ರದ ಕರಾವಳಿಯಲ್ಲಿರುವ ಗುಜರಾತ್ನ ವಲ್ಸಾದ್ನಲ್ಲಿರುವ ಜನಪ್ರಿಯ ಪ್ರವಾಸಿ ತಾಣ ತಿಥಾಲ್ ಬೀಚ್ ನ್ನು ಜೂನ್ 14 ರವರೆಗೆ ಪ್ರವಾಸಿಗರಿಗೆ ಮುಚ್ಚಲಾಗಿದೆ.

ಚಂಡಮಾರುತ ಭಾನುವಾರ ಅಥವಾ ಸೋಮವಾರ ದಕ್ಷಿಣ ಗುಜರಾತ್ ತಲುಪಬಹುದು. ಪ್ರಸ್ತುತ ಅಲರ್ಟ್ ಸೂಚನೆಯಲ್ಲಿದ್ದೇವೆ. ಎಲ್ಲಾ ಅಧಿಕಾರಿ ಗಳು ಪ್ರಧಾನ ಕಚೇರಿಯಿಂದ ಹೊರಹೋಗದಂತೆ ಸೂಚಿಸಲಾಗಿದೆ.

ಚಂಡಮಾರುತದಿಂದಾಗಿ ಇಂದು, ನಾಳೆ ಮತ್ತು 12 ರಂದು ದಕ್ಷಿಣ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಲಘು ಮಳೆ ಮತ್ತು ಗುಡುಗು ಸಹಿತ ಮಳೆಯನ್ನು ತರುತ್ತದೆ. ಗುಜರಾತ್ ಮತ್ತು ಸೌರಾಷ್ಟ್ರಗಳಲ್ಲಿ ಸಹ ಮಳೆಯಾಗಲಿದೆ. ಎಲ್ಲಾ ಬಂದರುಗಳಿಗೆ ದೂರದ ಎಚ್ಚರಿಕೆಯ ಸಂಕೇತವನ್ನು ಕಳುಹಿಸಲಾಗಿದೆ ಎಂದು ಅಹಮದಾಬಾದ್ ನ ಹವಾಮಾನ ಕೇಂದ್ರದ ನಿರ್ದೇಶಕಿ ಮನೋರಮಾ ಮೊಹಂತಿ ಹೇಳಿದ್ದಾರೆ.