ರಾಜ್ಯಾಧ್ಯಂತ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ 1.11 ಲಕ್ಷ ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಒಟ್ಟು 458 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗಾಗಿ 11,810 ಶಾಲೆಗಳ ನೋಂದಣಿ ಮಾಡಿಕೊಂಡಿವೆ. ಜೂನ್.12ರಿಂದ ಆರಂಭಗೊಳ್ಳುವ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗೆ 1,11,689 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ನಿಗದಿತ ದಿನಾಂಕದ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು ಸಿ.ಆರ್.ಪಿ.ಸಿ 1973 ಕಲಂ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಜಿರಾಕ್ಸ್, ಟೈಪಿಂಗ್ ಮುಂತಾದವು ಗಳನ್ನು ನಿಷೇಧಿಸಲಾಗಿದೆ.
ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ವಿಧ್ಯಾರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನೂಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ.
ಜೂನ್ 12 ರಿಂದ 19 ರವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ಪರೀಕ್ಷಾ ಕೇಂದ್ರಗಳಿಂದ ಮನೆಗೆ ವಾಪಸ್ ತೆರಳುವಾಗ ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು ನಿರ್ವಾಹಕರಿಗೆ ತೋರಿಸಿ ಪ್ರಯಾಣಿಸಬಹುದಾಗಿದೆ.