ನಾವು ನುಡಿದಂತೆ ನಡೆಯುತ್ತೇವೆ. 2013 ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊಟ್ಟ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರ ಕೊಟ್ಟ ಭರವಸೆಗಳಲ್ಲಿ ಶೇ. 10 ರಷ್ಟು ಮಾತ್ರ ಭರವಸೆ ಈಡೇರಿಸಿದೆ ಎಂದರು.
ರಾಹುಲ್ ಗಾಂಧಿ ಅವರು ಚುನಾವಣಾ ಪ್ರಚಾರದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡ ಲಾಗುವುದು ಎಂದು ಘೋಷಿಸಿದ್ದರು. ಇಂದು ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಮಧ್ಯಾಹ್ನ 1 ಗಂಟೆ ಯಿಂದ ರಾಜ್ಯಾದ್ಯಂತ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಬಹುದು ಎಂದು ತಿಳಿಸಿದ್ದಾರೆ.
ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಬಿಪಿಎಲ್, ಎಪಿಎಲ್ ಎಂಬ ಯಾವುದೇ ನಿಯಮ ಇಲ್ಲ. ಎಲ್ಲಾ ಮಹಿಳೆಯರು ಉಚಿತವಾಗಿ ಪ್ರಯಾಣಿಸಬ ಹುದು. 3 ತಿಂಗಳವರೆಗೆ ಯಾವುದೇ ದಾಖಲೆ ತೋರಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. 3 ತಿಂಗಳ ಒಳಗೆ ಎಲ್ಲರೂ ಸ್ಮಾರ್ಟ್ ಕಾರ್ಡ್ ಮಾಡಿಸಬೇಕು ಎಂದು ಮಾಹಿತಿ ನೀಡಿದ್ದಾರೆ.