ಮುಂಬೈ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಟೆಕ್ಕಿಯೊಬ್ಬ ನನ್ನು ಮುಂಬೈ ಪೊಲೀಸರು ಬಂಧಿಸಿ ದ್ದಾರೆ.
ಆರೋಪಿ ಸಾಗರ್ ಬರ್ವೆ ಖಾಸಗಿ ಸಂಸ್ಥೆಯ ಡೇಟಾ ಫೀಡಿಂಗ್ ಮತ್ತು ಅನಾಲಿಟಿಕ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತನಿಖೆ ನಡೆಸುತ್ತಿದ್ದ ಮುಂಬೈ ಪೊಲೀಸರು ಆರೋಪಿಯನ್ನು ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಯನ್ನು ಮಂಗಳವಾರದ ವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಪವಾರ್ ವಿರುದ್ಧ ಆರೋಪಿ ಫೇಸ್‌ಬುಕ್‌ನಲ್ಲಿ ಕೊಲೆ ಬೆದರಿಕೆ ಹಾಕಿದ್ದ. ಬೆದರಿಕೆಗಳನ್ನು ಪೋಸ್ಟ್ ಮಾಡಲು ಆತ ಎರಡು ನಕಲಿ ಖಾತೆಗಳನ್ನು ರಚಿಸಿದ್ದ ಎಂದು ಮಾಹಿತಿ ನೀಡಿದ್ದಾರೆ.
ಆಪಾದಿತ ಬೆದರಿಕೆಗಳಿಗೆ ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಮಾಜಿ ಸಿಎಂಗೆ ಭದ್ರತೆ ಹೆಚ್ಚಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.