Friday, 22nd November 2024

ವಿಧಾನಸಭಾ ಚುನಾವಣೆ: ಮಧ್ಯಪ್ರದೇಶದಲ್ಲಿ ಪ್ರಿಯಾಂಕಾ ಪ್ರಚಾರಕ್ಕೆ ಚಾಲನೆ

ಜಬಲ್ಪುರ್: ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿರುವ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಪಕ್ಷದ ಪರ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ.

ರಾಜ್ಯದಲ್ಲಿನ ವಿವಿಧ ಹಗರಣಗಳಿಂದ ಹಿಡಿದು ನಿರುದ್ಯೋಗ, ಮಹಿಳೆಯರು ಮತ್ತು ಬುಡಕಟ್ಟು ಜನಾಂಗದವರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ದವರೆಗಿನ ವಿಷಯಗಳ ಬಗ್ಗೆ ಆಡಳಿತಾರೂಢ ಬಿಜೆಪಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ಬಿಜೆಪಿಯ ಡಬಲ್ ಇಂಜಿನ್​ ಸರ್ಕಾರಕ್ಕೆ ಹಿಮಾಚಲ ಪ್ರದೇಶ, ಕರ್ನಾಟಕದ ಜನತೆ ತಕ್ಕ ಉತ್ತರ ನೀಡಿದ್ದಾರೆ ಎನ್ನುವ ಮೂಲಕ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ ಗೆಲುವಿಗೆ ರಣಕಹಳೆ ಮೊಳಗಿಸಿ ದ್ದಾರೆ.

ಸೋಮವಾರ ನರ್ಮದಾ ನದಿಗೆ ಪೂಜೆ ಸಲ್ಲಿಸಿದ ಪ್ರಿಯಾಂಕಾ ಗಾಂಧಿ, ನಂತರ ಜಬಲ್ಪುರ್ ಜಿಲ್ಲೆಯಲ್ಲಿ ಸಭೆ ಯನ್ನು ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡುವ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ ಪಕ್ಷದ ಪ್ರಚಾರಕ್ಕೆ ಚಾಲನೆ ಕೊಟ್ಟರು.

ಕಳೆದ 220 ದಿನಗಳಲ್ಲಿ ಮಧ್ಯಪ್ರದೇಶದಲ್ಲಿ 250 ಹಗರಣಗಳು ನಡೆದಿವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಿದ ನಂತರ ಬಿಜೆಪಿ ಸರ್ಕಾರವು ಕಳೆದ ಮೂರು ವರ್ಷಗಳಲ್ಲಿ ತಂದ ಅಭಿವೃದ್ಧಿ ಇದು ಎಂದು ಟೀಕಾ ಪ್ರಹಾರ ನಡೆಸಿದರು.