Monday, 25th November 2024

ಪತ್ನಿ, ಮೂವರು ಪುತ್ರಿಯರ ಕೊಂದು, ವ್ಯಕ್ತಿ ಆತ್ಮಹತ್ಯೆ

Murder

ಗಾರಿಯಾ: ತನ್ನ ಪತ್ನಿ ಮತ್ತು ಮೂವರು ಪುತ್ರಿಯರನ್ನು ಕೊಂದು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

ಮುನ್ನಾ ಯಾದವ್ ತನ್ನ ಪತ್ನಿ ಪೂಜಾ ದೇವಿ, ನಂತರ ತನ್ನ ಮೂವರು ಪುತ್ರಿಯರಾದ ಸುಮನ್ (18), ಅಂಚಲ್ (16) ಮತ್ತು ರೋಶನಿ ಕುಮಾರಿ (15) ಅವರನ್ನು ಹರಿತವಾದ ವಸ್ತುವಿನಿಂದ ಕೊಂದಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರು ಪುತ್ರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆ ನಂತರ ಯಾದವ್ ತನ್ನ ಮನೆಯ ಹೊರಗಿನ ಮರಕ್ಕೆ ನೇಣು ಬಿಗಿದುಕೊಂಡಿದ್ದಾನೆ. ಯಾದವ್‌ನ ಇಬ್ಬರೂ ಪುತ್ರರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಖಗಾರಿಯಾದ ಪೊಲೀಸ್ ವರಿಷ್ಠಾಧಿಕಾರಿ ಅಮಿತೇಶ್ ಕುಮಾರ್ ತಿಳಿಸಿದರು.

ಬುಧವಾರ ಘಟನೆ ನಡೆದಿದ್ದು, ಯಾದವ್ ಅವರ ಪುತ್ರರಿಬ್ಬರೂ ಮಾಹಿತಿ ನೀಡಿದ್ದಾರೆ.

ಪೊಲೀಸರು ಘಟನೆಗೆ ಸಂಬಂಧಿಸಿದ ಎಲ್ಲಾ ಸಂಬಂಧಿತ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಸ್ಪಿ ಹೇಳಿದರು.