Saturday, 23rd November 2024

ಕಾಂಗ್ರೆಸ್ ಸೇರುವುದಕ್ಕಿಂತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದು ಮೇಲೂ

ನಾಗ್ಪುರ: ಕಾಂಗ್ರೆಸ್ ಪಕ್ಷ ಸೇರುವುದಕ್ಕಿಂತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದು ಮೇಲೂ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ.

ರಾಜಕಾರಣಿಯೊಬ್ಬರು ಒಮ್ಮೆ ಕಾಂಗ್ರೆಸ್ ಸೇರಲು ಆಫರ್ ನೀಡಿದ್ದರು, ಆ ಪಕ್ಷದ ಸದಸ್ಯನಾಗುವುದಕ್ಕಿಂತ ಬಾವಿಗೆ ಹಾರಿ ಸಾಯುವುದೇ ಮೇಲು ಎಂದು ತಿಳಿಸಿದ್ದೇ ಎಂದು ಗಡ್ಕರಿ ಹೇಳಿಕೊಂಡಿದ್ದಾರೆ.

ಕಾಂಗ್ರೆಸ್ ತನ್ನ 60 ವರ್ಷಗಳ ಆಡಳಿತದಲ್ಲಿ ಮಾಡಿದ್ದಕ್ಕೆ ಹೋಲಿಸಿದರೆ ಕಳೆದ ಒಂಬತ್ತು ವರ್ಷಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರವು ದೇಶದಲ್ಲಿ ಎರಡು ಪಟ್ಟು ಕೆಲಸ ಮಾಡಿದೆ ಎಂದು ಗಡ್ಕರಿ ತಿಳಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಒಂಬತ್ತು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಭಂಡಾರಾದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗಡ್ಕರಿ, ಬಿಜೆಪಿಗಾಗಿ ಕೆಲಸ ಮಾಡಿದ ತಮ್ಮ ಆರಂಭಿಕ ದಿನಗಳನ್ನು ನೆನಪಿಸಿಕೊಂಡರು ಮತ್ತು ಪಕ್ಷದ ಪ್ರಯಾಣದ ಬಗ್ಗೆ ಮುಕ್ತವಾಗಿ ಮಾತನಾಡಿದರು.