Friday, 22nd November 2024

ಜೂ.​22 ರಂದು ಕರ್ನಾಟಕ ಬಂದ್​​ಗೆ ಕರೆ

ಬೆಂಗಳೂರು: ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಜೂ.​22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ ಕರೆ ನೀಡಿದೆ.
ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಕೆಸಿಸಿಐ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ಒಂದು ವೇಳೆ ದರ ಏರಿಕೆಯನ್ನು ಹಿಂಪಡೆಯದೇ ಇದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆಯ ಎಚ್ಚರಿಕೆ ನೀಡಿತ್ತು.