Saturday, 14th December 2024

ಎಲ್ಲ ತಾಲ್ಲೂಕುಗಳಲ್ಲೂ ಜೂ.27ರಂದು ಕೆಂಪೇಗೌಡ ಜಯಂತಿ ಆಚರಣೆ

ಬೆಂಗಳೂರು: ರಾಜ್ಯದ ಎಲ್ಲ ತಾಲ್ಲೂಕುಗಳಲ್ಲೂ ಜೂ.27ರಂದು ಕೆಂಪೇಗೌಡ ಜಯಂತಿ ಆಚರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ವಿಧಾನಸೌಧದಲ್ಲಿ ಕೆಂಪೇಗೌಡ ಜಯಂತಿ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಬೆಂಗಳೂರಿನಲ್ಲಿ ಜೂನ್ 27ರ ಬೆಳೆಗ್ಗೆ 9ಕ್ಕೆ ಕೆಂಪೇಗೌಡರ ನಾಲ್ಕು ಗೋಪುರಗಳ ಬಳಿ ಹಾಗೂ ಮಾಗಡಿಯಲ್ಲಿ ಜ್ಯೋತಿ ಯಾತ್ರೆಗೆ ಚಾಲನೆ ನೀಡಲಾಗುವುದು. ಈ ಕಾರ್ಯಕ್ರಮಕ್ಕೆ ಐವರು ಸಚಿವರನ್ನು ನಿಯೋಜಿಸಲಾಗಿದೆ. ಮಧ್ಯಾಹ್ನ 12ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ. ಪ್ರಶಸ್ತಿ ಕಾರ್ಯಕ್ರಮ ನಡೆಯಲಿದೆ. ಮಾಜಿ ಸಚಿವ ಬಿ.ಎಲ್‌.ಶಂಕರ್‌ ನೇತೃತ್ವದ ಸಮಿತಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲಿದೆ ಎಂದು ಮಾಹಿತಿ ನೀಡಿದರು.