ಭಾರತೀಯ ಕುಸ್ತಿಪಟು ಒಕ್ಕೂಟದ ಅಧ್ಯಕ್ಷ ಬ್ರುಜ್ ಭೂಷಣ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿರುವ ಕುಸ್ತಿಪಟುಗಳು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಳೆದ 5 ತಿಂಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.
ಇತ್ತೀಚೆಗೆ ಕೇಂದ್ರ ಸರಕಾರದ ಜೊತೆ ಮಾತುಕತೆ ನಡೆಸಿದ ಕುಸ್ತಿಪಟುಗಳು ಸೂಕ್ತ ಕ್ರಮದ ಭರವಸೆ ದೊರೆತ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂದೆ ಪಡೆಯುವ ಭರವಸೆ ನೀಡಿದ್ದರು. ಅಲ್ಲದೇ ನ್ಯಾಯಸಮ್ಮತವಾಗಿ ಕುಸ್ತಿಪಟು ಸಂಸ್ಥೆಯ ಚುನಾವಣೆ ನಡೆಸುವುದಾಗಿ ಭರವಸೆ ಪಡೆದಿದ್ದರು. ಆದರೆ ಹೈಕೋರ್ಟ್ ಚುನಾವಣೆಗೆ ತಡೆ ನೀಡಿದೆ.
ಜೂ.15ರಂದು ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅಲ್ಲದೇ ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡಿದ್ದರಿಂದ ನಾವು ಪ್ರತಿಭಟನೆಯನ್ನು ಹಿಂದೆ ಪಡೆಯಲು ನಿರ್ಧರಿಸಿದ್ದೇವೆ ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.