ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎರಡೂ ತಂಡಗಳು ಮುಖಾ ಮುಖಿಯಾಗಲಿವೆ. 2023ರ ವಿಶ್ವಕಪ್‌ನ ಅಂತಿಮ ಪಂದ್ಯ ನವೆಂಬರ್ 19 ರಂದು ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಪ್ರಶಸ್ತಿ ಪಂದ್ಯವೂ ನಡೆಯಲಿದೆ.
ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧದ ಪಂದ್ಯದೊಂದಿಗೆ ತನ್ನ ಅಭಿಯಾನವನ್ನು ಪ್ರಾರಂಭಿಸುತ್ತದೆ. ಈ ಪಂದ್ಯ ಚೆನ್ನೈನ ಚೆಪಾಕ್ ಕ್ರೀಡಾಂಗಣ ದಲ್ಲಿ ನಡೆಯಲಿದೆ.
ಟೀಂ ಇಂಡಿಯಾ ತನ್ನ ಕೊನೆಯ ಲೀಗ್ ಪಂದ್ಯವನ್ನು ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಆಡಲಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯ ಅಕ್ಟೋಬರ್ 29 ರಂದು ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ.