Saturday, 14th December 2024

ಜುಲೈ.1 ರಂದು ಶ್ರೀದೇವಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಕಾಲರ್‌ಶಿಪ್ ಟೆಸ್ಟ್

ತುಮಕೂರು: ನಗರದ ಶಿರಾರಸ್ತೆಯ ಶ್ರೀದೇವಿ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ ವತಿಯಿಂದ ಜುಲೈ.1 ರಂದು ಶನಿವಾರ ಬೆಳಗ್ಗೆ 10 ಕ್ಕೆ ಶ್ರೀದೇವಿ ಎಂಜಿನಿಯರಿಂಗ್ ಕಾಲೇಜಿನ ಆಡಿಟೋರಿಯಂ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಆರ್. ಹುಲಿ ನಾಯ್ಕರ್‌ ವಹಿಸಲಿದ್ದು, ಶ್ರೀದೇವಿ ವೈದ್ಯಕೀಯ ನಿರ್ದೇಶಕ ಡಾ.ರಮಣ್ ಆರ್ ಹುಲಿನಾಯ್ಕರ್, ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಎಂ.ಎಸ್.ಪಾಟೀಲ್, ಟ್ರಸ್ಟಿಯಾದ ಅಂಬಿಕಾ ಎಂ ಹುಲಿನಾಯ್ಕರ್, ಶ್ರೀದೇವಿ ಆಸ್ಪತ್ರೆಯ ನೇತ್ರತಜ್ಞ ಡಾ.ಲಾವಣ್ಯ ಹಾಗೂ ಶ್ರೀದೇವಿ ಎಂಜಿನಿಯರಿಂಗ್ ಕಾಲೇಜಿನ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಶ್ರೀದೇವಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕೊಡಿಸಲು ಸ್ಕಾಲರ್‌ಶಿಪ್ ಪರೀಕ್ಷೆ ಏರ್ಪಡಿಸಿದೆ. ಸ್ಕಾಲರ್‌ ಶಿಪ್ ಪರೀಕ್ಷೆಯಲ್ಲಿ ಉತ್ತಮ ಸ್ಥಾನಗಳಿಸುವ ಪ್ರತಿಯೊಬ್ಬ ಅಭ್ಯರ್ಥಿಯೂ ಕನಿಷ್ಟ 50 ಸಾವಿರದಿಂದ ಗರಿಷ್ಟ 3 ಲಕ್ಷದವರೆಗೆ ಸ್ಕಾಲರ್‌ಶಿಪ್ ಸೌಲಭ್ಯ ನೀಡಲಾಗುತ್ತದೆಯೆಂದು ಶ್ರೀದೇವಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ನರೇಂದ್ರ ವಿಶ್ವನಾಥ್‌ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.