ಕಳೆದ ವರ್ಷ ಡಿಸೆಂಬರ್ನಿಂದ ನಾಗ್ಪುರ-ಮುಂಬೈ ಎಕ್ಸ್ಪ್ರೆಸ್ವೇ ಭಾಗಶಃ ತೆರೆದ ಬಳಿಕ ಒಟ್ಟು 39 ಮಾರಣಾಂತಿಕ ಅಪಘಾತ ಗಳು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿ ದ್ದಾರೆ. ಈ ಎಕ್ಸ್ಪ್ರೆಸ್ವೇಯಲ್ಲಿ ಒಟ್ಟು 616 ಸಣ್ಣ ಮತ್ತು ದೊಡ್ಡ ಅಪಘಾತಗಳು ಸಂಭವಿಸಿವೆ, ಇದರಲ್ಲಿ 656 ಜನರು ಗಂಭೀರ ಮತ್ತು ಸಣ್ಣ ಗಾಯಗಳಿಂದ ಬಳಲು ತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಶನಿವಾರ ಮುಂಜಾನೆ, ಬುಲ್ಧಾನಾ ಜಿಲ್ಲೆಯ ಎಕ್ಸ್ಪ್ರೆಸ್ವೇಯಲ್ಲಿ ಡಿವೈಡರ್ಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಗೆ ಬಳಿಕ ಬೆಂಕಿ ಹೊತ್ತಿಕೊಂಡಿದ್ದರಿಂದ 25 ಪ್ರಯಾಣಿಕರು ಸುಟ್ಟು ಕರಕಲಾದರು ಎಂದು ಪೊಲೀಸರು ತಿಳಿಸಿದ್ದಾರೆ.