Thursday, 12th December 2024

ವೇದಗಳನ್ನು ಪರಿಚಯಿಸಿದ ಕೀರ್ತಿ ವ್ಯಾಸರಾಜರಿಗೆ ಸಲ್ಲುತ್ತದೆ: ವೀರೇಶಾನಂದ ಸ್ವಾಮೀಜಿ

ತುಮಕೂರು: ವೇದಗಳನ್ನು ಪರಿಚಯಿಸಿದ ಕೀರ್ತಿ ವ್ಯಾಸರಾಜರಿಗೆ ಸಲ್ಲುತ್ತದೆ ಎಂದು ವೀರೇಶಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದರು.
ಇಲ್ಲಿನ ರಾಮಕೃಷ್ಣ ನಗರದ ಶ್ರೀ ಶಿರಡಿಸಾಯಿನಾಥ ದೇಗುಲದಲ್ಲಿ ಹಮ್ಮಿಕೊಂಡಿದ್ದ ಗುರುಪೂರ್ಣಿಮೆ ಉದ್ಘಾಟಿಸಿ ಮಾತನಾಡಿ ದರು. ವೇದಗಳನ್ನು ವಿಭಜನೆ ಮಾಡಿ 4 ವೇದ ಮತ್ತು 18 ಪುರಾಣಗಳನ್ನು ಜನರಿಗೆ ಪರಿಚಯಿಸಿದ ಕೀರ್ತಿ ವೇದ ವ್ಯಾಸರಾಜರಿಗೆ ಸಲ್ಲುತ್ತದೆ. ಶಂಕರಾಚಾರ್ಯ, ಸ್ವಾಮಿ ವಿವೇಕಾನಂದರು, ಶಿರಡಿ ಬಾಬಾರವರು ಮಹಾನ್ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿ ದವರು ಎಂದರು.
ಗುರುತ್ವಾಕರ್ಷಣೆಯನ್ನು ಕಂಡು ಹಿಡಿದ ನ್ಯೂಟನ್‌ನಗೆ ಭೂಮಿ ತಾಯಿಯೇ ಗುರುವಾಗಿ ಪರಿಣಿಮಿಸಿದಳು. ಗುರುವಿನ ಕೃಪೆ ಭಕ್ತ ಮತ್ತು ಭಗವಂತನ ನಡುವೆ ಇರುವಂತಹ ಸೇತುವೆ. ಈ ಸೇತುವೆ ಬಲಿಷ್ಠವಾದಷ್ಟು ಭಗವಂತನೆಡೆಗೆ ಹೋಗುವ ಪ್ರಯಾಣಕ್ಕೆ ಸಾರ್ಥ ಕತೆ, ಧನ್ಯತೆ ಇರುತ್ತದೆ ಎಂದು ಹೇಳಿದರು.
ಸಂಸದ ಜಿ.ಎಸ್. ಬಸವರಾಜು ಮಾತನಾಡಿ, ಮನುಷ್ಯ ವಯಸ್ಸಾದ ನಂತರ ಧಾರ್ಮಿಕತೆಯತ್ತ ವಾಲುವುದು ಬಹಳ ಉತ್ತಮ ಕಾರ್ಯ. ಈ ನಿಟ್ಟಿನಲ್ಲಿ ತಾವು ಸಹ ಸಾಯಿಬಾಬಾ ಸೇವೆ ಮಾಡುತ್ತಾ ಧಾರ್ಮಿಕತೆಯತ್ತ ಸಾಗುತ್ತಿದ್ದೇನೆ. ಪ್ರತಿಯೊಬ್ಬರೂ ಸಹ
ಬದುಕಿನಲ್ಲಿ ಧಾರ್ಮಿಕತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ಸಾಹಿತಿ ಕವಿತಾಕೃಷ್ಣ ಮಾತನಾಡಿ, ಆಷಾಢಮಾಸದಲ್ಲಿ ಬರುವ ಬಹಳ ಪವಿತ್ರವಾದ ಗುರುಪೂರ್ಣಿಮೆಯನ್ನು ಕಳೆದ 13 ವರ್ಷದಿಂದಲೂ  ಸಾಯಿನಾಥ ಮಂದಿರದಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಮಂದಿರಕ್ಕೆ ಬಂದು ಸಾಯಿಬಾಬಾನ ದರ್ಶನ ಪಡೆಯುತ್ತಿದ್ದಾರೆ ಎಂದರು.
ನಗರದ ವಿವಿಧಡೆ ಇರುವ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಈ ವೇಳೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್. ಗುರುಸಿದ್ದಪ್ಪ, ಎಂ.ಪಿ.ರಾಜಶೇಖರ್, ಹೊನ್ನೇಶ್‌ಕುಮಾರ್, ಉಮಾಶಂಕರ್, ಲಕ್ಷಣ್ ಹಾಗೂ ಭಕ್ತರು ಪಾಲ್ಗೊಂಡಿದ್ದರು.