ಕಟ್ಟಡದಲ್ಲಿದ್ದ ಜನರನ್ನು ರಕ್ಷಿಸುವ ಕಾರ್ಯಾಚರಣೆ ಸುಮಾರು 10 ತಾಸುಗಳ ಕಾಲ ನಡೆಯಿತು.
ಕಟ್ಟಡಕ್ಕೆ ಬೆಂಕಿ ಬೀಳುತ್ತಿದ್ದಂತೆ ಪೊಲೀಸರು ಮತ್ತು ಅಗ್ನಿಶಾಮಕ ದಳದವರಿಗೆ ಕರೆ ಮಾಡಲಾಯಿತು. ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಅಷ್ಟರಲ್ಲಿ ಮೂರು ಜನರ ಮೃತದೇಹ ಪತ್ತೆಯಾಗಿತ್ತು. ಶೋ ರೂಮ್ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ ಮಹಿಳೆ ಪೂರ್ತಿಯಾಗಿ ಬೆಂದು ಹೋದ ಸ್ಥಿತಿಯಲ್ಲಿ ಸಿಕ್ಕಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾ ಯಿತು. ಆದರೆ ಬದುಕುಳಿದಿಲ್ಲ. ಬೆಂಕಿ ಹೊತ್ತಿ ಉರಿಯಲು ಕಾರಣವೇನು ಎಂಬುದು ಗೊತ್ತಾಗಿಲ್ಲ. ಬಹುತೇಕ ಎಲ್ಲ ಸಾಮಗ್ರಿಗಳೂ ಸುಟ್ಟುಕರಕಲಾಗಿವೆ ಎಂದು ಝಾನ್ಸಿ ಪೊಲೀಸ್ ಅಧಿಕಾರಿ ರಾಜೇಶ್ ಎಸ್. ತಿಳಿಸಿದ್ದಾರೆ.
ಕಳೆದ ತಿಂಗಳ ಗುಜರಾತ್ನ ರಾಜಕೋಟ್ನಲ್ಲಿರುವ ಗಾಲಾ ಗ್ರಾಮದ ಬಳಿಯ ಮೋರ್ಬಿ ಮಲಿಯಾ ಹೈವೇದಲ್ಲಿರುವ ಸಿಲಿಂಡರ್ ಗೋದಾಮು ಸಂಪೂರ್ಣ ಸುಟ್ಟು ಬೂದಿಯಾಗಿತ್ತು.