Sunday, 5th January 2025

ಖಾಸಗಿ ಶಾಲೆಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಆರ್‌ಟಿಇ ಸೀಟುಗಳು ಭರ್ತಿಯಾಗುತ್ತಿಲ್ಲ

ತುಮಕೂರು: ಆರ್‌ಟಿಇ ಪ್ರವೇಶಾತಿಗೆ ಸಂಬ0ಧಿಸಿದ0ತೆ ಪೋಷಕರಲ್ಲಿ ವ್ಯಾಪಕ ಅರಿವು ಮೂಡಿಸಿ ಜಿಲ್ಲೆಯ ಖಾಸಗಿ ಶಾಲೆಗಳಲ್ಲಿ ಆರ್‌ಟಿಇ ಪ್ರವೇಶಾತಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಡಿಡಿಪಿಐ ಹಾಗೂ ಬಿಇಓಗಳಿಗೆ ಸೂಚಿಸ ಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ತಿಳಿಸಿದರು.
 ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರೀಕ್ಷಿತ ಪ್ರಮಾಣದಲ್ಲಿ ಆರ್‌ಟಿಇ ಸೀಟುಗಳು ಭರ್ತಿಯಾಗುತ್ತಿಲ್ಲ, ಆರ್‌ಟಿಇ ಸೀಟುಗಳಿಗೆ ಸಂಬಂಧಿಸಿದಂತೆ ಪೋಷಕರು ತಮಗಾಗುತ್ತಿರುವ ಸಮಸ್ಯೆಗಳ ಕುರಿತಂತೆ ಹೆದರದೆ ದೂರು ಕೊಡಬೇಕು ಮತ್ತು ನಿಗದಿತ ಶುಲ್ಕಕ್ಕಿಂತ ಹೆಚ್ಚು ಶುಲ್ಕವನ್ನು ಆರ್‌ಟಿಇ ಸೀಟುಗಳಿಗೆ ಖಾಸಗಿ ಶಾಲೆಗಳು ವಸೂಲಿ ಮಾಡುವಂತಿಲ್ಲ ಎಂದು ತಿಳಿಸಿ ದರು.
ನಕಲಿ ವೈದ್ಯರ ವಿರುದ್ಧ ಕ್ರಮ: ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳ ಸಾವಿನ ಪ್ರಕರಣಗಳನ್ನು ತಗ್ಗಿಸಲು ಅಗತ್ಯ ಮಕ್ಕಳ ತಜ್ಞರು, ಗೈನಾಕಲಾಜಿಸ್ಟ್ ಮತ್ತು ಆರೈಕೆ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಬೇಕಾಗುತ್ತದೆ. ಈ ಕುರಿತಂತೆ ಡಿಹೆಚ್‌ಓಗೆ ಸೂಚನೆ ನೀಡಲಾ ಗುವುದು ಮತ್ತು ಜಿಲ್ಲಾಸ್ಪತ್ರೆಗೆ ಸ್ವತಃ ಭೇಟಿ ನೀಡುವುದಾಗಿ ತಿಳಿಸಿದ ಜಿಲ್ಲಾಧಿಕಾರಿಗಳು, ನಕಲಿ ವೈದ್ಯರುಗಳು ಮತ್ತು ಭ್ರೂಣಲಿಂಗ ಪತ್ತೆ ಅಕ್ರಮಗಳಿಗೆ ಸಂಬಂಧಿಸಿದಂತೆ ಅಗತ್ಯ ತಪಾಸಣೆಗಳನ್ನು ಕೈಗೊಳ್ಳುವಂತೆ ಡಿಎಚ್‌ಒಗೆ ಸೂಚಿಸುವುದಾಗಿ ತಿಳಿಸಿದರು.
ಹಿಂದೂ ರುದ್ರಭೂಮಿ ಭರ್ತಿಯಾಗಿ ಶವ ಸಂಸ್ಕಾರಕ್ಕೆ ಸ್ಥಳಾವಕಾಶ ಇಲ್ಲದಿದ್ದಲ್ಲಿ ಜಾಗ ಮಂಜೂರು ಮಾಡಲು ಅರ್ಜಿ ಸಲ್ಲಿಸಿದ್ದಲ್ಲಿ ಮಂಜೂರು ಮಾಡಲಾಗುವುದು. ಮುಂದಿನ ದಿನಗಳಲ್ಲಿ ಪಾಲಿಕೆ ವತಿಯಿಂದ ಶವ ಸಂಸ್ಕಾರಕ್ಕೆ ಸಂಬ0ಧಿಸಿದ ವಿದ್ಯುತ್ ದಹನದ ವ್ಯವಸ್ಥೆ ಮಾಡಲು ಆಯುಕ್ತರಿಗೆ ಸೂಚಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂದಾಯ ಪ್ರಕರಣಗಳನ್ನು ಬಹುತೇಕ ಇತ್ಯರ್ಥಗೊಳಿಸಲಾಗಿದೆ. 665 ಅರ್ಜಿಗಳು ಪಿಂಚಣಿಗೆ ಬಾಕಿ ಇದ್ದು, ಇವುಗಳನ್ನೂ ಸಹ ಇತ್ಯರ್ಥಗೊಳಿಸಲಾಗಿದೆ ಎಂದರು.
 ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು  ಮಾತನಾಡಿ, ಸುಮಾರು 2500 ಕೋಟಿ ವೆಚ್ಚದಲ್ಲಿ ಜಿಲ್ಲೆಯಲ್ಲಿ ಮಹತ್ವಾಕಾಂಕ್ಷಿ ಜಲಜೀವನ್ ಮಿಷನ್ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದ್ದು, ಶೇ.8ರಷ್ಟು ಯೋಜನೆ ಪೂರ್ಣಗೊಂಡಿದ್ದು, ಶೇ. 92ರಷ್ಟು ಬಾಕಿ ಇದೆ. ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಪಾರದರ್ಶಕವಾಗಿ ಹಂತ-ಹಂತವಾಗಿ ಅನುಷ್ಟಾನಗೊಳಿಸಲಾಗುವುದು ಎಂದರು.
ಜಿಲ್ಲೆಯಾದ್ಯಂತ ಕಾರ್ಯ ನಿರ್ವಹಿಸುತ್ತಿರುವ ಆರ್‌ಓ ಘಟಕಗಳಿಗೆ ಇನ್ನು ಮುಂದೆ ಆರ್‌ಓ ಘಟಕ ಸುಸ್ಥಿತಿಯಲ್ಲಿರುವ ಪ್ರಮಾಣ ಪತ್ರ ಆಧರಿಸಿ ಪಾವತಿ ಮಾಡಲಾಗುವುದು ಎಂದ ಅವರು, ಮುಂದಿನ ಮೂರು ತಿಂಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದಲ್ಲಿ ಕಳೆದ 10 ವರ್ಷಗಳ ಆಕ್ಷನ್ ಪ್ಲಾನ್ ಆಧರಿಸಿ ಯಾವ ಯಾವ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ ಆ ಗ್ರಾಮಗಳಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತಾವು ಅಧಿಕಾರಿ ವಹಿಸಿಕೊಂಡ ದಿನದಿಂದ 30 ಇಲಾಖೆಗಳ ಪರಿಶೀಲನಾ ಸಭೆಯನ್ನು ನಡೆಸಿದ್ದು, ಪ್ರತಿ 15 ದಿನಗಳಿಗೊಮ್ಮೆ ಇಲಾಖೆಗಳು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಓಪನಿಂಗ್ ಬ್ಯಾಲೆನ್ಸ್ ಮತ್ತು ಕ್ಲೋಸಿಂಗ್ ಬ್ಯಾಲೆನ್ಸ್ ಮಾಹಿತಿಯನ್ನು ತಮಗೆ ಸಲ್ಲಿಸಬೇಕು. ಯಾವುದೇ ಕಡತಗಳು 30 ದಿನಗಳೊಳಗಾಗಿ ವಿಲೇವಾರಿಯಾಗಬೇಕು. ಹಾಜರಾತಿ ಮತ್ತು ಶಿಸ್ತು ಕಾಪಾಡಿಕೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಪಾಲಿಕೆ ಆಯುಕ್ತ ದರ್ಶನ್ ಸೇರಿದಂತೆ ವಿವಿಧ ಅಧಿಕಾರಿಗಳು  ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *