Sunday, 24th November 2024

ತಾಂಜಾನಿಯಾ: ಮೊದಲ ಐಐಟಿ ಕ್ಯಾಂಪಸ್ ನಿರ್ಮಾಣ

ನವದೆಹಲಿ: ಭಾರತದ ಹೊರಗಿನ ಮೊದಲ ಐಐಟಿ ಕ್ಯಾಂಪಸ್ ತಾಂಜಾನಿಯಾದ ಜಂಜಿಬಾರ್‌’ನಲ್ಲಿ ನಿರ್ಮಾಣವಾಗಲಿದೆ.

ಪೂರ್ವ ಆಫ್ರಿಕಾದ ತಾಂಜೇನಿಯಾದ ದ್ವೀಪಸಮೂಹ ಜಾಂಜಿಬಾರ್ನಲ್ಲಿ ಐಐಟಿ ಮದ್ರಾಸಿನ ಕ್ಯಾಂಪಸ್ ಸ್ಥಾಪನೆಗೆ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಲಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ಜಂಜಿಬಾರ್ ಅಧ್ಯಕ್ಷ ಹುಸೇನ್ ಅಲಿ ಮ್ವಿನಿ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಜೈಶಂಕರ್ ಪ್ರಸ್ತುತ ತಾಂಜಾನಿಯಾ ಪ್ರವಾಸದಲ್ಲಿದ್ದಾರೆ.

ಭಾರತದ ಶಿಕ್ಷಣ ಸಚಿವಾಲಯ, ಐಐಟಿ ಮದ್ರಾಸ್ ಮತ್ತು ಜಾಂಜಿಬಾರ್ನ ಶಿಕ್ಷಣ ಮತ್ತು ವೃತ್ತಿಪರ ತರಬೇತಿ ಸಚಿವಾಲಯದ ನಡುವೆ ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020 (NEP) ಉನ್ನತ ಕಾರ್ಯಕ್ಷಮತೆ ಹೊಂದಿರುವ ಭಾರತೀಯ ವಿಶ್ವವಿದ್ಯಾಲಯಗಳ ಕ್ಯಾಂಪಸ್ಗಳನ್ನು ಇತರ ದೇಶಗಳಲ್ಲಿ ಸ್ಥಾಪಿಸಲು ಪ್ರೋತ್ಸಾಹಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.

ಐಐಟಿ 2023ರ ಅಕ್ಟೋಬರ್ ತಿಂಗಳಿನಲ್ಲಿ ಆರಂಭಗೊಳ್ಳಲಿದೆ ಎಂದು ಹೇಳಿದೆ.