ಹುಬ್ಬಳ್ಳಿ: ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ (76) ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನ ರಾದರು. ಪುತ್ರಿಯ ಮನೆಗೆ ಆಗಮಿಸಿದ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿದೆ ಎನ್ನಲಾಗಿದೆ.
ಮೃತದೇಹವನ್ನು ಸಂಜೆ ಅಥವಾ ನಾಳೆ ಬೆಳಿಗ್ಗೆ ಕಲಘಟಗಿಗೆ ತರುವ ಸಾಧ್ಯತೆ ಇದೆ.
ಸಿ.ಎಂ.ನಿಂಬಣ್ಣವರ್ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ದಾಖಲಿಸಿದ್ದರು. ಮಾಜಿ ಶಾಸಕರ ಅಗಲಿಕೆಗೆ ರಾಜಕೀಯ ಮುಖಂಡರು, ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.