ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರ ಬಂಧನ ಆಗಿದೆ. ಹಾಸನದ ಬಡಾವಣೆ ಠಾಣೆ ಪೊಲೀ ಸರು ನೀನಾಸಂ ಅಶ್ವತ್ಥ್ ಅವರನ್ನು ಅರೆಸ್ಟ್ ಮಾಡಿದ್ದಾರೆ. ಜಡ್ಜ್ ಎದುರು ಅವರು ತಪ್ಪು ಒಪ್ಪಿಕೊಂಡಿದ್ದಾರೆ. ಅಲ್ಲದೇ ಶೇ. 25ರಷ್ಟು ಹಣವನ್ನು ಪಾವತಿ ಮಾಡಿದ್ದಾರೆ. ಹಾಗಾಗಿ ನೀನಾಸಂ ಅಶ್ವತ್ಥ್ ಅವರಿಗೆ ನ್ಯಾಯಾಲಯವು ಜಾಮೀನು ನೀಡಿದೆ.
ಇನ್ನುಳಿದ ಹಣವನ್ನು ಪಾವತಿಸಲು ಅವರು ಸಮಯಾವಕಾಶ ಕೋರಿದ್ದಾರೆ.
ನಟ ನೀನಾಸಂ ಅಶ್ವತ್ಥ್ ಅವರು ಹಾಸನದ ರೋಹಿತ್ ಎಂಬವರಿಂದ ಹಸು ಖರೀದಿ ಮಾಡಿದ್ದರು. ಆಗ 1.5 ಲಕ್ಷ ರೂಪಾಯಿ ಮೌಲ್ಯದ ಚೆಕ್ ನೀಡಿದ್ದರು. ಆದರೆ ಹಣ ಪಡೆಯಲು ರೋಹಿತ್ ಅವರು ಬ್ಯಾಂಕ್ಗೆ ಹೋದಾಗ ಚೆಕ್ಬೌನ್ಸ್ ಆಗಿರುವುದು ತಿಳಿದುಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಹಾಸನದ ಜೆಎಮ್ಎಫ್ಸಿ ಕೋರ್ಟ್ನಲ್ಲಿ ರೋಹಿತ್ ಅವರು ಕೇಸ್ ಹಾಕಿದ್ದರು. ಈ ಪ್ರಕರಣದಲ್ಲಿ ನೀನಾಸಂ ಅಶ್ವತ್ಥ್ ಅವರು ಕೋರ್ಟ್ಗೆ ಹಾಜರಾಗಿರಲಿಲ್ಲ. ಐದನೇ ಬಾರಿಗೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು.