Sunday, 15th December 2024

ಆರು ವರ್ಷದ ಮಗಳನ್ನು ಕೊಂದ ತಾಯಿ

ತುಮಕೂರು: ಆರು ವರ್ಷದ ಮಗಳನ್ನು ತಾಯಿಯೇ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಲ್ಲಿನ  ಶಾಂತಿನಗರದ ನಿವಾಸಿ ಹೇಮಲತಾ ತನ್ನ  ಮಗಳಾದ ತನ್ವಿತಾಳನ್ನು(6)  ಕೊಲೆ ಮಾಡಿರುವ ಆರೋಪಿ.ಘಟನೆ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮಾನಸಿಕವಾಗಿ ಅಸ್ವಸ್ಥಳಾಗಿರುವ ಹೇಮಲತಾ ಮಗಳಾದ ತನ್ವಿತಾಳ ಮೇಲೆ ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಬಾಲಕಿಯ ಕಿರುಚಾಟ ಕೇಳಿ ನೆರೆಹೊರೆಯವರು ಮನೆಗೆ ಬಂದು ತಾಯಿಯ ಕೈಯಿಂದ ಮಗಳನ್ನು ರಕ್ಷಿಸಲು ಪ್ರಯತ್ನಿಸಿದರು. ಆದರೆ ಅಷ್ಟರಲ್ಲಿ  ಬಾಲಕಿ ಸಾವನ್ನಪ್ಪಿದ್ದಳು. ಆರೋಪಿ ಹೇಮಲತಾ ಖಾಸಗಿ ಶಾಲೆಯೊಂದ ರಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಇತ್ತೀಚೆಗೆ ಅನಾರೋಗ್ಯದ ಕಾರಣ ಕೆಲಸ ಬಿಟ್ಟಿದ್ದರು. ಖಾಸಗಿ ಆಸ್ಪತ್ರೆಯೊಂದರಲ್ಲಿ ಮಾನಸಿಕ ಕಾಯಿಲೆಗೆ ಚಿಕಿತ್ಸೆ ಪಡೆಯು ತ್ತಿದ್ದರು ಎನ್ನಲಾಗಿದೆ.
ಘಟನೆ ಸಂಬಂಧ ಮೃತ ಬಾಲಕಿ ತಂದೆ ದೂರು ನೀಡಿದ್ದು, ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.