Friday, 22nd November 2024

ದೇಗುಲದ ಆವರಣದಲ್ಲಿ ವಿಡಿಯೋಗ್ರಫಿ ನಿಷೇಧ

ಡೆಹ್ರಾಡೂನ್: ಕೇದಾರನಾಥ ದೇಗುಲದ ಆವರಣದಲ್ಲಿ ಭಕ್ತರು ಛಾಯಾಚಿತ್ರ ತೆಗೆಯು ವುದು ಮತ್ತು ವಿಡಿಯೋ ಮಾಡುವು ದನ್ನು ನಿಷೇಧಿಸಲಾಗಿದೆ. ಮಹಿಳಾ ಬ್ಲಾಗರ್ ಒಬ್ಬರು ದೇವಸ್ಥಾನದ ಮುಂದೆ ತನ್ನ ಗೆಳೆಯನಿಗೆ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ದೇವಾಲಯ ಸಮಿತಿಯು ದೇವಾಲಯದ ಆವರಣದಲ್ಲಿ ವಿವಿಧೆಡೆ ಬೋರ್ಡ್ಗಳನ್ನು ಹಾಕಿದ್ದು, ‘ಮೊಬೈಲ್ ಫೋನ್ಗಳೊಂದಿಗೆ ದೇವಾಲಯದ ಆವರಣವನ್ನು ಪ್ರವೇಶಿಸಬೇಡಿ; ದೇವಾಲಯದ ಒಳಗೆ ಯಾವುದೇ ರೀತಿಯ ಛಾಯಾಗ್ರಹಣ ಮತ್ತು ವೀಡಿಯೋ ಗ್ರಫಿಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಇದರೊಂದಿಗೆ, ದೇವಾಲಯಕ್ಕೆ ಬರುವ ಜನರು ‘ಯೋಗ್ಯ ಬಟ್ಟೆಗಳನ್ನು’ ಧರಿಸಲು ಮತ್ತು ದೇವಾಲಯದ ಆವರಣದಲ್ಲಿ ಡೇರೆ ಗಳು ಅಥವಾ ಶಿಬಿರಗಳನ್ನು ಸ್ಥಾಪಿಸುವುದನ್ನು ನಿಲ್ಲಿಸುವಂತೆ ಕೇಳಿಕೊಂಡಿದೆ.
ಆದೇಶವನ್ನು ಪಾಲಿಸದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಬರೆದಿರುವ ಬೋರ್ಡ್ಗಳಲ್ಲಿ ತಿಳಿಸಲಾಗಿದೆ.