Friday, 20th September 2024

ಬೆತ್ತಲೆ ಮೆರವಣಿಗೆ ವಿಡಿಯೊ ಶೇರ್ ಮಾಡದಂತೆ ಕೇಂದ್ರ ಸರ್ಕಾರ ಆದೇಶ

ಗುವಾಹಟಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೊವನ್ನು ಶೇರ್ ಮಾಡದಂತೆ ಟ್ವಿಟರ್ ಸೇರಿದಂತೆ ಇತರೆ ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶಿಸಿದೆ.

ಈ ಸಂಬಂಧ ಸರ್ಕಾರಿ ಮೂಲವನ್ನು ಉಲ್ಲೇಖಿಸಿ ಟ್ವೀಟ್ ಮಾಡಿದೆ.

ಮೇ 4ರಂದು ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೊವೊಂದು ಬುಧವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

ಇಬ್ಬರು ಮಹಿಳೆಯರನ್ನು ಹಿಂಸಿಸುತ್ತಿರುವುದು ದೃಶ್ಯದಲ್ಲಿದೆ. ಇದರಿಂದಾಗಿ ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ ಗೊಂಡಿದೆ.

ಈ ಹೇಯ ಕೃತ್ಯದ ಕುರಿತು ಮಣಿಪುರ ಪೊಲೀಸ್ ತನಿಖೆ ನಡೆಸುತ್ತಿದೆ. ಸಾಮಾಜಿಕ ಮಾಧ್ಯಮಗಳು ಭಾರತೀಯ ಕಾನೂನಿಗೆ ಬದ್ಧವಾಗಿರಬೇಕು ಎಂದು ಆದೇಶದಲ್ಲಿ ತಿಳಿಸಿದೆ.