ನವದೆಹಲಿ: ಮಣಿಪುರದ ಪರಿಸ್ಥಿತಿ ಕುರಿತು ಸದನದಲ್ಲಿ ಚರ್ಚಿಸುವಂತೆ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ ಎಂದು ಲೋಕಸಭೆಯಲ್ಲಿ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.
ಮುಂಗಾರು ಅಧಿವೇಶನದ ಮೊದಲ ದಿನ ಲೋಕಸಭೆಯಲ್ಲಿ ಪ್ರಧಾನಿಯವರೊಂದಿಗೆ ನಡೆಸಿದ ಸಂಕ್ಷಿಪ್ತ ಸಂವಾದದಲ್ಲಿ ಸೋನಿಯಾ ಗಾಂಧಿ ಈ ಬೇಡಿಕೆಯನ್ನು ಮುಂದಿಟ್ಟರು.
ಪ್ರತಿಪಕ್ಷ ನಾಯಕರ ಪೀಠವನ್ನು ತಲುಪಿದ ಪ್ರಧಾನಿ ಮೋದಿ, ಸೋನಿಯಾ ಗಾಂಧಿ ಜೊತೆ ಸಂಕ್ಷಿಪ್ತ ಮಾತುಕತೆ ನಡೆಸಿದರು.
ಈಶಾನ್ಯ ರಾಜ್ಯದಲ್ಲಿನ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸುವಂತೆ ಸೋನಿಯಾ ಗಾಂಧಿ ಸಂವಾದದ ವೇಳೆ ಪ್ರಧಾನಿಯನ್ನು ಒತ್ತಾಯಿಸಿದರು ಎಂದು ಚೌಧರಿ ಹೇಳಿದರು.
ಗುರುವಾರ ಅಧಿವೇಶನಕ್ಕೆ ಮುನ್ನ ಸಂಸತ್ತಿನ ಸಂಕೀರ್ಣದಲ್ಲಿ ಮಾಧ್ಯಮಗಳೊಂದಿಗೆ ವಾಡಿಕೆಯಂತೆ ಸಂವಾದದಲ್ಲಿ ಮಾತನಾ ಡಿದ ಪ್ರಧಾನಿ, ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆಯು 140 ಕೋಟಿ ಭಾರತೀಯರನ್ನು ನಾಚಿಕೆಪಡಿಸಿದೆ ಮತ್ತು ಕಾನೂನು ತನ್ನ ಪೂರ್ಣ ಶಕ್ತಿಯಿಂದ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ತಪ್ಪಿತಸ್ಥರನ್ನು ಉಳಿ ಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.