Friday, 22nd November 2024

‘ಬೇಟಿ ಬಚಾವೋ’ ಘೋಷಣೆ ‘ಬೇಟಿ ಜಲಾವೋ’ ಎಂದಾಗಿದೆ: ಮಮತಾ ಬ್ಯಾನರ್ಜಿ

mamatabanerjee

ಇಂಫಾಲ್: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿಯ ‘ಬೇಟಿ ಬಚಾವೋ’ ಘೋಷಣೆ ಈಗ ‘ಬೇಟಿ ಜಲಾವೋ’ ಆಗಿ ಬದಲಾಗಿದೆ ಎಂದು ಹೇಳಿದರು.

ಮಣಿಪುರದಲ್ಲಿ ಹಿಂಸಾಚಾರ, ಬಿಲ್ಕಿಸ್ ಬಾನೋ ಪ್ರಕರಣ ಮತ್ತು ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣಗಳ ಬಗ್ಗೆ ಬಿಜೆಪಿ ಯನ್ನು ಟೀಕಿಸಿದ್ದಾರೆ.

“ನೀವು ‘ಬೇಟಿ ಬಚಾವೋ’ ಘೋಷಣೆಯನ್ನು ನೀಡಿದ್ದೀರಿ, ಈಗ ನಿಮ್ಮ ಘೋಷಣೆ ಎಲ್ಲಿದೆ? ಮಣಿಪುರದ ಜನರೊಂದಿಗೆ ನಾವು ನಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸುತ್ತೇವೆ. ಇಂದು ಮಣಿಪುರ ಹೊತ್ತಿ ಉರಿಯುತ್ತಿದೆ, ಇಡೀ ದೇಶವೇ ಹೊತ್ತಿ ಉರಿಯುತ್ತಿದೆ. ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ ದಲ್ಲಿ ಜಾಮೀನು ಮಂಜೂರಾಗಿದೆ ಎಂದರು.

ಮು0ಬರುವ ಚುನಾವಣೆಯಲ್ಲಿ ದೇಶದ ಮಹಿಳೆಯರು ನಿಮ್ಮನ್ನು ದೇಶದ ರಾಜಕೀಯ ದಿಂದ ಹೊರಹಾಕಲಿದ್ದಾರೆ. ಬಿಜೆಪಿಯ ‘ಬೇಟಿ ಬಚಾವೋ’ ಈಗ ‘ಬೇಟಿ ಜಲಾವೋ’ ಆಗಿ ಬದಲಾಗಿದೆ. ತೃಣಮೂಲ ಕಾಂಗ್ರೆಸ್‌ಗೆ ಯಾವುದೇ ಕುರ್ಚಿ ಬೇಕಾಗಿಲ್ಲ, ಆದರೆ ಈ ಬಿಜೆಪಿ ಆಡಳಿತ ಹೋಗಬೇಕೆಂದು ನಾವು ಬಯಸುತ್ತೇವೆ ಎಂದು ತಿಳಿಸಿದರು.