ಮುಖ್ಯಮಂತ್ರಿಯಾಗಿ ಸುದೀರ್ಘ ಅವಧಿಗೆ ಅಧಿಕಾರ ನಡೆಸಿದ ದೇಶದ 2ನೇ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಮೂಲಕ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಜ್ಯೋತಿ ಬಸು ಅವರ ದಾಖಲೆಯನ್ನು ಮುರಿದರು.
ಬಿಜು ಜನತಾ ದಳದ ಅಧ್ಯಕ್ಷ ಪಟ್ನಾಯಕ್ ಅವರು, ಒಡಿಶಾದ ಮುಖ್ಯಮಂತ್ರಿಯಾಗಿ ಸತತ ಐದು ಬಾರಿ ಆಯ್ಕೆಯಾಗಿದ್ದಾರೆ. 2000ನೇ ಇಸ್ವಿಯಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಯಾಗಿ ಅಧಿಕಾರ ವಹಿಸಿಕೊಂಡಿದ್ದ ಪಟ್ನಾಯಕ್ ಅವರು ರಾಜ್ಯದಲ್ಲಿ 23 ವರ್ಷ 4 ತಿಂಗಳು 17 ದಿನಗಳ ಕಾಲ ಆಡಳಿತ ನಡೆಸಿದ್ದಾರೆ.
ಪಶ್ಚಿಮಬಂಗಾಳ ಮುಖ್ಯಮಂತ್ರಿಯಾಗಿ ಕಮ್ಯುನಿಸ್ಟ್ ಪಕ್ಷದ ನಾಯಕ ದಿವಂಗತ ಜ್ಯೋತಿ ಬಸು ಅವರು 23 ವರ್ಷ 138 ದಿನಗಳ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು.
ಸಿಕ್ಕೀಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರು ಡಿಸೆಂಬರ್ 12, 1994 ರಿಂದ ಮೇ 27, 2019 ರವರೆಗೆ ಸಿಎಂ ಆಗಿ ಸರಿಸುಮಾರು 25 ವರ್ಷಗಳ ಕಾಲ ಅಧಿಕಾರ ನಡೆಸಿದ್ದಾರೆ.
ತಂದೆ ಬಿಜು ಪಟ್ನಾಯಕ್ ಅವರ ನಿಧನದ ನಂತರ 1997 ರಲ್ಲಿ ನವೀನ್ ಅವರು ರಾಜಕೀಯ ಪ್ರವೇಶಿಸಿದರು. ತಮ್ಮ ತಂದೆಯ ಹೆಸರಿನಲ್ಲಿ ‘ಬಿಜು ಜನತಾ ದಳ’ ಸ್ಥಾಪಿಸುವ ಮೂಲಕ ಮಾಜಿ ಸಿಎಂ ಉತ್ತರಾಧಿಕಾರಿಯಾಗಿ ಘೋಷಿಸಿಕೊಂಡರು. ಅವರು 1997 ರಿಂದ ಬಿಜು ಜನತಾ ದಳದ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ. ಅಸ್ಕಾ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಅವರು, 1998 ರಿಂದ 2000 ರ ವರೆಗೆ ಉಕ್ಕು ಮತ್ತು ಗಣಿಗಳ ಕೇಂದ್ರ ಸಚಿವರಾಗಿ ಕೆಲಸ ಮಾಡಿದ್ದರು.