Friday, 22nd November 2024

ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ: 6 ಮಂದಿ ಬಂಧನ

ಇಂಫಾಲ: ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆಗೊಳಿಸಿ ಎಳೆದೊಯ್ದು ಮೆರವಣಿಗೆ ಮಾಡಿದ ಅಮಾನವೀಯ ಪ್ರಕರಣ ಜಾಲಾಡುತ್ತಿರುವ ಪೊಲೀಸರು ಓರ್ವ ಬಾಲಾಪರಾಧಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಇದರಿಂದ ಕೇಸ್​ನಲ್ಲಿ ಈವರೆಗೂ 6 ಮಂದಿಯನ್ನು ಬಂಧಿಸಿದಂತಾಗಿದೆ.

ಮೇ 4ರಂದು ಕಾಂಗ್‌ಪೊಕ್ಸಿ ಜಿಲ್ಲೆಯ ಫೈನೋಮ್ ಗ್ರಾಮದಲ್ಲಿ ದುಷ್ಕರ್ಮಿಗಳ ಗುಂಪೊಂದು ಕುಕಿ ಸಮುದಾಯದ ಮಹಿಳೆಯ ರಿಬ್ಬರನ್ನು ವಿವಸ್ತ್ರಗೊಳಿಸಿ ಜಮೀನಿನ ಕಡೆಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿತ್ತು. ಇದರ ವಿಡಿಯೋ ಹೊರಬಿದ್ದ ಬಳಿಕ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಪ್ರಕರಣ ದಾಖಲಿಸಿಕೊಂಡು ವಿಡಿಯೋದಲ್ಲಿ ಕಾಣಿಸಿಕೊಂಡವರ ಶೋಧ ನಡೆಸುತ್ತಿರುವ ಪೊಲೀಸರು, ವಿಡಿಯೋ ಹೊರಬಿದ್ದ ಮೊದಲ ದಿನವೇ ಪ್ರಮುಖ ಕೀಚಕನನ್ನು ಬಂಧಿಸಿ ದ್ದರು. ಇದಾದ ಬಳಿಕ ಮೂವರನ್ನು ಹೆಡೆಮುರಿ ಕಟ್ಟಲಾಗಿತ್ತು. ನಿನ್ನೆ ಮತ್ತೊಬ್ಬ ಸಿಕ್ಕಿಬಿದ್ದಿ ದ್ದಾನೆ. ವಿಡಿಯೋ ವೈರಲ್‌ ಆದ ಬಳಿಕ ಹಲವರು ಕಣ್ಮರೆಯಾಗಿದ್ದು, ಶಂಕಿತ ಅಡಗುತಾಣ ಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಉಳಿದ ಆರೋಪಿಗಳನ್ನು ಬಂಧಿಸಲು ಸರ್ವಪ್ರಯತ್ನ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜನಾಂಗೀಯ ಘರ್ಷಣೆಯಲ್ಲಿ ಬೇಯುತ್ತಿರುವ ಮಣಿಪುರದಲ್ಲಿ ಈಗ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ದಾಳಿಕೋರರನ್ನು ಸದೆಬಡಿಯಲು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳು ಪೊಲೀಸ್​ ಕಸ್ಟಡಿಗೆ: ಬಂಧನಕ್ಕೊಳಗಾದ ಎಲ್ಲ 6 ಆರೋಪಿಗಳನ್ನು11 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಿ ಅವರಿಂದ ಉಳಿದವರ ಪತ್ತೆಗಾಗಿ ಬಲೆ ಬೀಸಲಾಗುವುದು ಎಂದು ತಿಳಿದುಬಂದಿದೆ.