ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು 8.5 ಕೋಟಿಗೂ ಹೆಚ್ಚು ರೈತರಿಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಪಿಎಂ ಕಿಸಾನ್ 14ನೇ ಕಂತಿನ ಹಣವನ್ನು ಅನ್ನದಾತರ ಬ್ಯಾಂಕ್ ಖಾತೆಗೆ ಜುಲೈ 28ರಂದು ಜಮಾ ಮಾಡಲಾಗುತ್ತದೆ.
ಈ ಯೋಜನೆಯು ಭೂ ಹಿಡುವಳಿದಾರ ರೈತ ಕುಟುಂಬಗಳಿಗೆ ವರ್ಷಕ್ಕೆ 6,000 ರೂ.ಗಳ ಆರ್ಥಿಕ ಪ್ರಯೋಜನವನ್ನು ನೀಡುತ್ತದೆ, ಇದನ್ನು ತಲಾ 2,000 ರೂ.ಗಳ ಮೂರು ಸಮಾನ ಕಂತುಗಳಲ್ಲಿ ಪಾವತಿಸಲಾಗುತ್ತದೆ.
ಯೋಜನೆಯು ಆರಂಭದಲ್ಲಿ 2 ಹೆಕ್ಟೇರ್ ವರೆಗೆ ಭೂಮಿಯನ್ನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ (ಎಸ್‌ಎಂಎಫ್) ಮೀಸಲಾಗಿತ್ತು ಆದರೆ ಯೋಜನೆಯ ವ್ಯಾಪ್ತಿಯನ್ನು ಜೂನ್ 01, 2019 ರಿಂದ ಎಲ್ಲಾ ಭೂ ಹಿಡುವಳಿ ರೈತರಿಗೆ ವಿಸ್ತರಿಸ ಲಾಯಿತು.
ಪಿಎಂ-ಕಿಸಾನ್ ಯೋಜನೆಯ 13 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿಯಲ್ಲಿ ಬಿಡುಗಡೆ ಮಾಡಿದರು.