Saturday, 23rd November 2024

ಸಿಕ್ಕಿಂ: ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ ಒಂದು ವರ್ಷ ಹೆರಿಗೆ ರಜೆ

ಗ್ಯಾಂಗ್ಟಕ್‌: ಸಿಕ್ಕಿಂ ರಾಜ್ಯದಲ್ಲಿ ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ ಒಂದು ವರ್ಷ ಹೆರಿಗೆ ರಜೆ ನೀಡಲಾಗುವುದು ಎಂದು ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್‌ ತಮಂಗ್‌ ಹೇಳಿದ್ದಾರೆ.

ನಾಗರಿಕ ಸೇವಾ ಅಧಿಕಾರಿಗಳ ಸಂಘದ ವಾರ್ಷಿಕ ಸಾಮಾನ್ಯ ಸಭೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ಘೋಷಣೆ ಮಾಡಿದರು. ಮಹಿಳೆಯರ ಜೊತೆಗೆ ಪುರುಷರಿಗೂ ಒಂದು ತಿಂಗಳು ಪಿತೃತ್ವ ರಜೆ ನೀಡಲಾಗುವುದು ಎಂದರು.

ಈ ಯೋಜನೆಯಿಂದ ಸರ್ಕಾರಿ ನೌಕರರು ತಮ್ಮ ಮಕ್ಕಳು ಹಾಗೂ ಕುಟುಂಬದ ಬಗ್ಗೆ ಕಾಳಜಿ ವಹಿಸಲು ಸಹಕಾರಿಯಾಗಲಿದೆ ಎಂದರು.

ಯೋಜನೆಯಲ್ಲಿನ ಕೆಲವು ಸೇವಾ ನಿಯಮಗಳನ್ನು ಬದಲಾವಣೆ ಮಾಡಿ ಶೀಘ್ರದಲ್ಲೇ ವಿವರ ಪ್ರಕಟಿಸಲಾಗುವುದು ಎಂದು ಪ್ರೇಮ್ ಸಿಂಗ್‌ ತಮಂಗ್‌ ಹೇಳಿದರು.

ರಾಜ್ಯದಲ್ಲಿ 1961ರ ಕಾಯ್ದೆ ಪ್ರಕಾರ ಮಹಿಳೆಯರಿಗೆ ಹೆರಿಗೆ ರಜೆ ನೀಡಲಾಗುತ್ತಿದೆ. ಸದ್ಯ ಮಹಿಳೆಯರು 6 ತಿಂಗಳು ಅಥವಾ 26 ವಾರಗಳ ವೇತನ ಸಹಿತ ಹೆರಿಗೆ ರಜೆ ಪಡೆಯು ತ್ತಿದ್ದಾರೆ. ಹಿಮಾಲಯದ ತಪ್ಪಲಿನಲ್ಲಿರುವ ಸಿಕ್ಕಿಂ ರಾಜ್ಯದಲ್ಲಿ ಸುಮಾರು 6.32 ಲಕ್ಷ ಜನರಿದ್ದಾರೆ.