Saturday, 23rd November 2024

ಲೋಕಸಭೆಯಲ್ಲಿ ಗದ್ದಲ, ಪ್ರತಿಭಟನೆ: ಕಲಾಪ ಮುಂದೂಡಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಮಣಿಪುರದಲ್ಲಿನ ಜನಾಂ ಗೀಯ ಹಿಂಸಾಚಾರ ಕುರಿತ ಚರ್ಚೆಗೆ ಗುರುವಾರ ವಿಪಕ್ಷಗಳು ಲೋಕಸಭೆಯಲ್ಲಿ ಗದ್ದಲ, ಪ್ರತಿಭಟನೆ ಮುಂದುವರೆಸಿದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡ ಲಾಯಿತು.
ಮಣಿಪುರದಲ್ಲಿ ಪರಿಸ್ಥಿತಿ ಕುರಿತು ಸಮಗ್ರ ಚರ್ಚೆಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಸದನದಲ್ಲಿ ಹೇಳಿಕೆ ನೀಡ ಬೇಕೆಂದು ಒತ್ತಾಯಿಸಿ ಕಳೆದ ಎಂಟು ದಿನಗಳಿಂದಲೂ ಪ್ರತಿಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಾ ಬಂದಿದ್ದು, ಚರ್ಚೆ ನಡೆಯದೆ ಕಲಾಪ ವ್ಯರ್ಥವಾಗುತ್ತಿದೆ.
ಇಂದು ಸಹ ಕಪ್ಪು ಪಟ್ಟಿ ಧರಿಸಿ ಸದನದ ಒಳಗಡೆ ಆಗಮಿಸಿದ್ದ ಇಂಡಿಯಾ ಒಕ್ಕೂಟದ ಸದಸ್ಯರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೋಲಾಹಲ ಮುಂದು ವರೆದಿದ್ದರಿಂದ ಸ್ಪೀಕರ್ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.
ದೇಶದ ಪ್ರಧಾನಿ ದೇಶದ ಮುಂದೆ ಬಂದು ಮಣಿಪುರದ ಬಗ್ಗೆ ಮಾತನಾಡಬೇಕು ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಆಗ್ರಹಿಸಿದ್ದಾರೆ.