ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕರ ಮುನಿ ಸಿನ ಬೆನ್ನಲ್ಲೇ, ಪಕ್ಷದ ಹಿರಿಯ ನಾಯಕರ ಜತೆಗೆ ಆಗಸ್ಟ್ 2ರಂದು ನವದೆಹಲಿ ಯಲ್ಲಿ ಸಭೆ ನಡೆಸಲು ಹೈಕಮಾಂಡ್ ತೀರ್ಮಾನಿಸಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಧ್ಯಾಹ್ನ ಸಭೆ ನಡೆಯಲಿದ್ದು, ಮುಖ್ಯ ಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜ್ಯದ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ.
ಸಚಿವ ಸ್ಥಾನ ಸಿಗದ ಕಾರಣಕ್ಕೆ ಮುನಿಸಿಕೊಂಡಿರುವ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರಿಗೆ ಸಭೆಗೆ ಆಹ್ವಾನ ನೀಡಲಾಗಿದೆ. ಸಚಿವ ಸಂಪುಟದ ಎಲ್ಲ ಸದಸ್ಯರು ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಪ್ರಧಾನ ಕಾರ್ಯ ದರ್ಶಿ ಕೆ.ಸಿ.ವೇಣುಗೋಪಾಲ್ ಸಹ ಭಾಗವಹಿಸ ಲಿದ್ದಾರೆ.
ತಾವು ಮಾಡಿರುವ ವರ್ಗಾವಣೆ ಶಿಫಾರಸುಗಳಿಗೆ ಸಚಿವರು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ 30ಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಅವರಿಗೆ ಜು.24ರಂದು ಪತ್ರ ಬರೆದಿದ್ದರು.
ಎಲ್ಲ ಸಚಿವರ ಜತೆಗೆ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ಸಭೆ ಜೂನ್ ತಿಂಗಳಲ್ಲಿ ನಿಗದಿಯಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಸಭೆ ರದ್ದಾಗಿತ್ತು.