Friday, 22nd November 2024

ಎರಡು ಸಮುದಾಯಗಳ ನಡುವೆ ಮತ್ತೆ ಗುಂಡಿನ ಚಕಮಕಿ

ಇಂಫಾಲ: ಜನಾಂಗೀಯ ಸಂಘರ್ಷಕ್ಕೆ ಬೆಂದು ಹೋಗಿರುವ ಮಣಿಪುರದಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಕೇಳಿ ಬಂದಿದೆ.

ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಮೊಯಿರಾಂಗ್‌ನಲ್ಲಿ ಎರಡು ಸಮುದಾಯಗಳ ನಡುವೆ ಮತ್ತೆ ಗುಂಡಿನ ಚಕಮಕಿ ನಡೆದಿದೆ.

ಹಿಂಸಾಚಾರದ ಸಂದರ್ಭ ಹಲವಾರು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಆರೋಪಿ ಸಲಾಗಿದೆ. ಗುಂಡಿನ ಚಕಮಕಿ ನಡೆದ ಸ್ಥಳದ ಸಮೀಪದಲ್ಲಿ ವಾಸಿಸುತ್ತಿದ್ದ ಅನೇಕ ಗ್ರಾಮಸ್ಥರು ಬೇರೆಡೆ ಆಶ್ರಯ ಪಡೆಯುತ್ತಿದ್ದಾರೆ. ನಿರಂತರ ಗುಂಡಿನ ಕಾಳಗ ದಿಂದ ಗ್ರಾಮಸ್ಥರೆಲ್ಲ ಭಯಗೊಂಡಿದ್ದಾರೆ ಎಂದು ಮತ್ತೊಬ್ಬರು ಸ್ಥಳೀಯರು ಹೇಳಿದ್ದಾರೆ.

ಇದಕ್ಕೂ ಮುನ್ನ ಬುಧವಾರ ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಸಿಬ್ಬಂದಿಯನ್ನು ಸಾಗಿಸಲು ಭದ್ರತಾ ಪಡೆಗಳು ಬಳಸು ತ್ತಿದ್ದ ಎರಡು ಬಸ್‌ಗಳಿಗೆ ಗುಂಪೊಂದು ಬೆಂಕಿ ಹಚ್ಚಿದೆ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಂಗಳವಾರ ಸಂಜೆ ದಿಮಾ ಪುರದಿಂದ ಬಸ್‌ಗಳು ಬರುತ್ತಿದ್ದಾಗ ಸಪೋರ್ಮಿನಾದಲ್ಲಿ ಈ ಘಟನೆ ಸಂಭವಿಸಿದೆ.

ಸುಮಾರು 3 ತಿಂಗಳ ಹಿಂದೆ ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತು. ಅಂದಿನಿಂದ 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ.