Friday, 22nd November 2024

ಬಂಗಾಳಕೊಲ್ಲಿಯಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ

ಬಂಗಾಳಕೊಲ್ಲಿ : ಬಂಗಾಳಕೊಲ್ಲಿಯಲ್ಲಿ ಭೂಕಂಪ ಸಂಭವಿಸಿದ್ದು, ಭೂಕಂಪನ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.4 ರಷ್ಟಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಶನಿವಾರ ಮಧ್ಯಾಹ್ನ 2:39ಕ್ಕೆ ಸಮುದ್ರದಲ್ಲಿ 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ.

ಭೂಕಂಪವು ಶನಿವಾರ ಮಧ್ಯಾಹ್ನ 2:39 ಕ್ಕೆ ಸಮುದ್ರದಲ್ಲಿ 10 ಕಿಮೀ ಆಳದಲ್ಲಿ ಸಂಭವಿಸಿದೆ. “ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 4.4 ಎಂದು ದಾಖಲಾಗಿದೆ. ಆದರೆ, ಇದುವರೆಗೆ ಯಾವುದೇ ಆಸ್ತಿ-ಪಾಸ್ತಿ ನಷ್ಟದ ಬಗ್ಗೆ ಮಾಹಿತಿ ಇಲ್ಲ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.