Friday, 22nd November 2024

ರಾಹುಲ್ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ನ್ಯಾಯಮೂರ್ತಿ ವರ್ಗಾವಣೆ

ವದೆಹಲಿ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಹೇಮಂತ್ ಎಂ ಪ್ರಚ್ಚಕ್ ವರ್ಗಾವಣೆ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದ್ದು, “ಉತ್ತಮ ನ್ಯಾಯದಾನ” ಎಂದು ಉಲ್ಲೇಖಿಸಿ ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆ ಕೊಲಿಜಿಯಂ ಮಾಡಿದೆ ಎಂದು ತಿಳಿದು ಬಂದಿದೆ.

ಪ್ರಚ್ಛಕ್ ಗುಜರಾತ್‌ ಹೈಕೋರ್ಟ್‌ನಿಂ ಬಿಹಾರದ ಪಾಟ್ನಾ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಶಿಫಾರಸು ಮಾಡಿದ್ದು, ಮಾನನಷ್ಟ ಮೊಕದ್ದಮೆಯಲ್ಲಿನ ಶಿಕ್ಷೆಯ ವಿರುದ್ಧ ರಾಹುಲ್ ಗಾಂಧಿಯ ಮೇಲ್ಮನವಿ ಯನ್ನು ಪರಿಗಣಿಸಲು ನಿರಾಕರಿಸಿದ ನ್ಯಾಯಮೂರ್ತಿ ಗೀತಾ ಗೋಪಿ ಮತ್ತು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರ ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಸಮೀರ್ ದವೆ ಸೇರಿದಂತೆ ಗುಜರಾತ್ ಹೈಕೋರ್ಟ್‌ನ ಇತರ ಮೂವರು ನ್ಯಾಯಾಧೀಶರನ್ನು ವರ್ಗಾವಣೆ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದೆ.

ನ್ಯಾಯಮೂರ್ತಿ ಸಮೀರ್‌ ದವೆ ರಾಜಸ್ಥಾನ ಹೈಕೋರ್ಟ್‌ಗೆ ಸ್ಥಳಾಂತರಿಸಲಾಗುವುದು ಮತ್ತು ನ್ಯಾಯಮೂರ್ತಿ ಗೀತಾ ಗೋಪಿ ಅವರನ್ನು ಮದ್ರಾಸ್ ಹೈ ಕೋರ್ಟ್‌ಗೆ ವರ್ಗಾಯಿಸಲಾಗುವುದು. ಗುಜರಾತ್ ಹೈಕೋರ್ಟ್‌ನ ಮತ್ತೊಬ್ಬ ನ್ಯಾಯಾಧೀಶ ನ್ಯಾಯಮೂರ್ತಿ ಅಲ್ಪೇಶ್ ವೈ ಕೊಗ್ಜೆ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲಾಗುತ್ತಿದ್ದು, ಅಲಹಾಬಾದ್, ಗುಜರಾತ್ ಮತ್ತು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗಳ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದೆ.