Friday, 22nd November 2024

ನಕಾಶಿಪಾರಾದಲ್ಲಿ ಗುಂಡಿನ ಚಕಮಕಿ: 15 ಜನರಿಗೆ ಗಾಯ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ನಕಾಶಿಪಾರಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಕನಿಷ್ಠ 15 ಜನರು ಗಾಯಗೊಂಡಿದ್ದಾರೆ.

ಗಾಯಾಳುಗಳು ಪ್ರಸ್ತುತ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಕಾಂಗ್ರೆಸ್‌ಗೆ ರಾಜಕೀಯ ಸಂಬಂಧ ಹೊಂದಿರುವ ಎರಡು ಕುಟುಂಬಗಳಿಗೆ ಸೇರಿದವರು ಎಂದು ವರದಿಯಾಗಿದೆ.

ಗಾಯಗೊಂಡ 15 ಮಂದಿಯಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸ್ಥಳೀಯ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಇತ್ತೀಚೆಗೆ ಪಶ್ಚಿಮ ಬಂಗಾಳದ ಮೂರು ಸ್ಥರಗಳ ಪಂಚಾಯ್ತಿ ಚುನಾವಣೆಯಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ ಎಂದು ಸ್ಥಳೀಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ರಾಯ್ ಹೇಳಿ ದ್ದಾರೆ. ಪೊಲೀಸ್ ತುಕಡಿಯನ್ನು ಅಲ್ಲಿಗೆ ನಿಯೋಜಿಸಲಾಗಿದೆ. ಪ್ರಕರಣ ತನಿಖಾ ಹಂತ ದಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಾಡಿಯಾದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಾಡಿಯಾ ಅಸೀಮ್ ಸಹಾ ಅವರು ತಮ್ಮ ಮನೆಗಳ ಮೇಲೆ ದಾಳಿ ಮಾಡಿದವರು ಇತ್ತೀಚಿನ ವರೆಗೂ ತೃಣಮೂಲ ಕಾಂಗ್ರೆಸ್‌ನೊಂದಿಗೆ ಸಂಬಂಧ ಹೊಂದಿದ್ದರು ಎಂದು ಇತ್ತೀಚೆಗೆ ಮುಕ್ತಾಯಗೊಂಡ ಪಂಚಾಯತ್ ಚುನಾ ವಣೆಗೆ ಮೊದಲು ಕಾಂಗ್ರೆಸ್‌ಗೆ ಸೇರ್ಪಪಡೆಗೊಂಡರು ಎಂದು ಆರೋಪಿಸಿದರು.

ಗೂಂಡಾಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 15 ಮಂದಿ ಗಾಯಗೊಂಡಿದ್ದಾರೆ. ಪೊಲೀಸರು ಮೂಕ ಪ್ರೇಕ್ಷಕರಂತೆ ವರ್ತಿಸಿದರು. ಶೂಟೌಟ್ ಮುಗಿದ ನಂತರ ಅವರು ಘಟನಾ ಸ್ಥಳಕ್ಕೆ ಆಗಮಿಸಿದರು. ಅಷ್ಟರಲ್ಲಿ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಸಹಾ ಆರೋಪಿಸಿದ್ದಾರೆ.

ಘಟನೆಯ ಹಿಂದೆ ತಮ್ಮ ಪಕ್ಷದ ಬೆಂಬಲಿಗರ ಕೈವಾಡವನ್ನು ತೃಣಮೂಲ ಕಾಂಗ್ರೆಸ್‌ನ ನಾಡಿಯಾ ಜಿಲ್ಲಾಧ್ಯಕ್ಷ ನಸೀರುದ್ದೀನ್ ಅಹ್ಮದ್ ನಿರಾಕರಿಸಿದ್ದಾರೆ.