Friday, 22nd November 2024

ಮಹಾರಾಷ್ಟ್ರದ ಮೂರು ಜಿಲ್ಲೆಯಲ್ಲಿ ಭೂಕಂಪ

ಕೊಲ್ಲಾಪುರ: ಕೊಲ್ಲಾಪುರ ಸೇರಿದಂತೆ ಸಾಂಗ್ಲಿ, ಸತಾರಾ ಜಿಲ್ಲೆಯಲ್ಲಿ ಬುಧವಾರ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 3.4 ದಾಖಲಾಗಿದೆ.

ಭೂಕಂಪದ ಕೇಂದ್ರಬಿಂದು ಸತಾರಾ ಜಿಲ್ಲೆಯ ಕೊಯ್ನಾ ಅಣೆಕಟ್ಟಿನಿಂದ ಕೇವಲ ಇಪ್ಪತ್ತು ಕಿಲೋ ಮೀಟರ್ ದೂರದಲ್ಲಿದೆ. ನಾಗರಿಕರು ಭಯಭೀತರಾಗಿದ್ದಾರೆ.

ಭೂಕಂಪದ ಕೇಂದ್ರ ಬಿಂದು ನೆಲದಿಂದ 5 ಕಿಮೀ ಆಳದಲ್ಲಿ ಇದೆ. ಕೊಲ್ಹಾಪುರದಿಂದ 76 ಕಿಮೀ ದೂರದಲ್ಲಿರುವ ಚಂದೋಲಿ ಅಭಯಾರಣ್ಯ ಪ್ರದೇಶದಲ್ಲಿ ಭೂಕಂಪದ ಅನುಭ ವವಾಗಿದೆ.

ಸತಾರಾ ಜಿಲ್ಲೆಯ ಕೊಯ್ನಾ ಅಣೆಕಟ್ಟು ಮತ್ತು ಅಭಯಾರಣ್ಯ ಪ್ರದೇಶದಲ್ಲಿ ಈ ಭೂ ಕಂಪನದ ಅನುಭವವಾಗಿದೆ. ಜಿಲ್ಲೆಯ ಪಟಾನ್ ನಗರದಲ್ಲಿ ಹಾಗೂ ಸಮೀಪದ ಗ್ರಾಮಗಳಲ್ಲಿ ಬೆಳಗ್ಗೆ 6.40ಕ್ಕೆ ಭೂಮಿ ನಡುಗಿದೆ.

ಕೊಯ್ನಾ ಅಣೆಕಟ್ಟಿನಿಂದ 20 ಕಿಮೀ ದೂರದಲ್ಲಿ ಭೂಕಂಪನದ ಅನುಭವವಾಗಿದ್ದು, ಅಣೆಕಟ್ಟು ಸುರಕ್ಷಿತವಾಗಿದೆ. ಭೂ ಕಂಪದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೊಲ್ಹಾಪುರ ಸತಾರಾ ಸೇರಿದಂತೆ ಸಾಂಗ್ಲಿ ಜಿಲ್ಲೆಯ ಶಿರಾಲಾ ತಾಲೂಕಿನ ಚಂದೋಲಿ ಅಭಯಾರಣ್ಯ ಪ್ರದೇಶದಿಂದ 15 ಕಿಮೀ ವ್ಯಾಪ್ತಿಯಲ್ಲಿ ಲಘು ಭೂಕಂಪನದ ಅನುಭವವಾಗಿದೆ.