ಮಸೂರಿ: ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಉತ್ತರಾಖಂಡ ರಾಜ್ಯದ ಮಸೂರಿಯಲ್ಲಿ ಭಾನುವಾರ ನಡೆದಿದೆ. ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಬೆಂಕಿ ಹತ್ತಿಕೊಂಡಿದೆ ಎಂದು ವರದಿಯಾಗಿದೆ.
ಕ್ಯಾಮಲ್ಸ್ ಬ್ಯಾಕ್ ರೋಡ್ ನಲ್ಲಿರುವ ಸಿಧುಸ್ ರಿಂಕ್ ಹೋಟೆಲ್ ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಮಧ್ಯರಾತ್ರಿ ನಡೆದ ದುರ್ಘಟನೆಯಲ್ಲಿ ಹೋಟೆಲ್ ನಲ್ಲಿ ಪಾರ್ಕ್ ಮಾಡಿದ್ದ ಎರಡು ಕಾರುಗಳು ಸುಟ್ಟು ಕರಕಲಾಗಿದೆ.
ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಅವಘಡ ಸಂಭವಿಸಿದಾಗ ಹೋಟೆಲ್‌ನಲ್ಲಿ ಪುನರ್ ನಿರ್ಮಾಣ ಕಾರ್ಯ ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ.
ಬೆಂಕಿ ಕಾಣಿಸಿಕೊಂಡ ಕಾರಣ ಜನರು ಭಯಭೀತರಾಗಿದ್ದರು. ಅಧಿಕಾರಿಗಳು ಪ್ರದೇಶದ ಜನರನ್ನು ಸ್ಥಳಾಂತರಿಸಿದರು. ಬೆಂಕಿಯ ಬಗ್ಗೆ ಮಾಹಿತಿ ಪಡೆದ ಹಲವಾರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ನಂದಿಸುವ ಕೆಲಸ ಜಾರಿಯಲ್ಲಿದೆ.