ಚೈನ್ನೈ: ಕಾವೇರಿ ನೀರು ಹಾರೈಸುವ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಮಾತುಕತೆಗಳ ಅವಶ್ಯಕತೆ ಇಲ್ಲ ಸುಪ್ರೀಂಕೋರ್ಟ್ ನಿರ್ದೇಶನವೇ ಅಂತಿಮ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.
ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೆ ತಮಿಳು ನಾಡು ಜಲಸಂಪನ್ಮೂಲ ಸಚಿವ ದೊರೈಮುರುಗನ್ ಹೇಳಿದ್ದಾರೆ.
ಕಾವೇರಿ ನೀರು ಹಂಚಿಕೆ ಕುರಿತಾಗಿ ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಅವರು, ಯಾವುದೇ ಕಾರಣಕ್ಕೂ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಮಾತಿಲ್ಲ ಎಂದು ತಿಳಿಸಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ತೀರ್ಪು ಅಂತಿಮವಾಗಿದ್ದು, ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಸಚಿವ ದೊರೈಮುರುಗನ್ ಹೇಳಿದ್ದಾರೆ.
ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನಿರು ಹರಿಸುವಂತೆ ಆದೇಶಿಸಿರುವ ಕಾವೇರಿ ನದಿ ನೀರು ಪ್ರಾಧಿಕಾರ ಹಾಗೂ ನಿಯಂತ್ರಣ ಸಮಿತಿ ನೀಡಿರುವ ಆದೇಶದ ವಿಚಾರವಾಗಿ ಸುಪ್ರೀಂ ಕೋರ್ಟ್ ಮದ್ಯಪ್ರವೇಶಿಸಲು ನಿರಾಕರಿಸಿದೆ.