Wednesday, 27th November 2024

ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನ ಶಂಕುಸ್ಥಾಪನೆ ಇಂದು

ವಾರಣಾಸಿ: ಪೂರ್ವಾಂಚಲ್‌ನ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜೊತೆಗೆ 1651 ಕೋಟಿ ರೂ ವೆಚ್ಚದ ಯೋಜನೆಗಳನ್ನು ಪೂರ್ವಾಂಚಲ್‌ಗೆ ಪ್ರಧಾನಿ ಉಡುಗೊರೆಯಾಗಿ ನೀಡಲಿದ್ದಾರೆ.

ಕ್ರಿಕೆಟ್ ಸ್ಟೇಡಿಯಂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್, ಲಿಟ್ಲ್ ಮಾಸ್ಟರ್ ಸುನಿಲ್ ಗವಾಸ್ಕರ್, ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಭಾಗವಹಿಸಲಿದ್ದಾರೆ.

ಇಂದು ತಮ್ಮ ಸಂಸದೀಯ ಕ್ಷೇತ್ರದ ಮೂರು ವಿಭಿನ್ನ ಸ್ಥಳಗಳಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ, ಮಧ್ಯಾಹ್ನ ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸ ಲಿದ್ದಾರೆ. ಇಲ್ಲಿಂದ ಹೆಲಿಕಾಪ್ಟರ್ ಮೂಲಕ ರಾಜತಾಲಬ್ ಬಳಿಯ ಸೇವಾಪುರಿ ವಿಧಾನಸಭೆಯ ಗಂಜಾರಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಪ್ರಧಾನಿ ಮೋದಿ ಅವರು ಗಂಜಾರಿಯಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡ ಲಿದ್ದಾರೆ.

ಗಂಜಾರಿಯಲ್ಲಿ 451 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಿರುವ ಅಂತಾರಾ ಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನ ಶಂಕುಸ್ಥಾಪನೆ ಯನ್ನು ಪ್ರಧಾನಿ ನೆರವೇರಿಸಲಿದ್ದಾರೆ. ಇಲ್ಲಿ ನಿರ್ಮಾಣವಾಗಲಿರುವ ಈ ಕ್ರೀಡಾಂಗಣವು ತನ್ನದೇ ಆದ ವಿಶಿಷ್ಟತೆಯನ್ನು ಹೊಂದಿದೆ. ಏಕೆಂದರೆ ಶಿವನಿಗೆ ಸಂಬಂಧಿಸಿದ ವಸ್ತುಗಳ ವಿಷಯದ ಮೇಲೆ ಈ ಕ್ರೀಡಾಂಗಣವನ್ನು ನಿರ್ಮಿಸಲಾಗುತ್ತಿದೆ. ಕ್ರೀಡಾಂಗಣದ ಹೊರಗೆ ಬೃಹತ್ ತ್ರಿಶೂಲಗಳನ್ನು ತಯಾರಿಸಲಾಗುತ್ತಿದ್ದು, ಅದರ ಮೇಲೆ ಫ್ಲಡ್ ಲೈಟ್​​ಗಳನ್ನು ಅಳವಡಿಸ ಲಾಗುವುದು.

ಪ್ರಧಾನಿಯವರು ರಸ್ತೆ ಮೂಲಕ ‘ರುದ್ರಾಕ್ಷಿ ಕನ್ವೆನ್ಷನ್ ಸೆಂಟರ್’ ತಲುಪಲಿದ್ದಾರೆ. 16 ವಿಭಾಗಗಳಲ್ಲಿ 1200 ಕೋಟಿ ರೂಪಾಯಿ ವೆಚ್ಚದಲ್ಲಿ ಯುಪಿ ಸರ್ಕಾರ ನಿರ್ಮಿಸಿರುವ 16 ಅಟಲ್ ವಸತಿ ಶಾಲೆಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಬಳಿಕ ಅವರು ಅಲ್ಲಿಂದ ದೆಹಲಿಗೆ ತೆರಳಲಿದ್ದಾರೆ.