Thursday, 12th December 2024

ಆಯುಷ್ಮಾನ್ ದಿವಸ್ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಜಾಥಾಕ್ಕೆ ಚಾಲನೆ

ತುಮಕೂರು: ಜಿಲ್ಲಾಸ್ಪತ್ರೆ ಆವರಣದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟ ಯೋಜನೆಯ ಸೇವೆಗೆ ೫ ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಆಯುಷ್ಮಾನ್ ದಿವಸ್ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಜಾಥಾಕ್ಕೆ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ರಾಮೇಗೌಡ ಹಸಿರುನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಜಿಲ್ಲಾಸ್ಪತ್ರೆಯ ಸ್ಥಾನೀಯ ವೈದ್ಯಾಧಿಕಾರಿ ಡಾ. ಚೇತನ್, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಜಿಲ್ಲಾ ಸಂಯೋಜಕರಾದ ಡಾ. ಸುಷ್ಮಾ, ಜಿಲ್ಲಾ ನರ್ಸಿಂಗ್ ಶಾಲೆಯ ಪ್ರಾಂಶುಪಾಲರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.