ಚೆನ್ನೈ: ತಮಿಳು ಚಿತ್ರರಂಗದ ಸೂಪರ್ಸ್ಟಾರ್ ವಿಜಯ್ ಸೇತುಪತಿ ಖಳನಾಯಕನಾಗಿ ನಟಿಸಿದ ಜವಾನ್ ಸಿನಿಮಾ ಭರ್ಜರಿ ಯಶಸ್ಸು ದಾಖಲಿಸಿದೆ. ಇದರ ನಡುವೆ ವಿಜಯ್ ಅವರ ಹಳೆಯ ಸಂದರ್ಶನದ ವಿಡಿಯೋ ತುಣುಕು ವೈರಲ್ ಆಗಿದೆ.
ಕೃತಿ ಶೆಟ್ಟಿ ತೆಲುಗಿನ ಉಪ್ಪೇನಾ ಚಿತ್ರದ ಮೂಲಕ ಟಾಲಿವುಡ್ಗೆ ಪದಾರ್ಪಣೆ ಮಾಡಿದರು. ಈ ಚಿತ್ರದಲ್ಲಿ ವಿಜಯ್ ಸೇತುಪತಿ ಅವರು ನಾಯಕಿ ಕೃತಿ ಶೆಟ್ಟಿ ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ. ಕೃತಿಯ ನಟನೆಯನ್ನು ನೋಡಿ ಸೇತುಪತಿ ಮನಸಾರೆ ಹೊಗಳಿದ್ದರು. ಅಲ್ಲದೆ, ಕೃತಿಯೊಂದಿಗೆ ತಮಿಳು ಚಿತ್ರವೊಂದರಲ್ಲಿ ನಟಿಸಲು ನಿರಾಕರಿಸಿದ್ದಕ್ಕೆ ಕಾರಣ ನೀಡಿರುವ ವಿಡಿಯೋ ತುಣುಕು ವೈರಲ್ ಆಗಿದೆ.
ನಾನು ಉಪ್ಪೇನಾ ಚಿತ್ರದಲ್ಲಿ ಕೃತಿಗೆ ತಂದೆಯಾಗಿ ಅಭಿನಯಿಸಿದ್ದೇನೆ. ನನ್ನ ಮಗಳೆಂದು ಭಾವಿಸಿದ ಮೇಲೆ ಅವಳೊಂದಿಗೆ ನಾನ್ಹೇಗೆ ರೊಮ್ಯಾನ್ಸ್ ಮಾಡಲು ಸಾಧ್ಯ ಎಂದು ಹೇಳಿ ದ್ದಾಗಿ ತಿಳಿಸಿದೆ. ಉಪ್ಪೇನಾ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ನನ್ನನ್ನು ನಿನ್ನ ತಂದೆಯಂದೇ ಭಾವಿಸು. ನನ್ನ ಮಗನಿಗೆ ಸುಮಾರು 15 ವರ್ಷ. ಆತ ಕೃತಿಗಿಂತ ಸ್ವಲ್ಪ ಚಿಕ್ಕವನು. ಕೃತಿಯನ್ನು ಕೂಡ ನಾನು ಮಗಳಂತೆ ಭಾವಿಸುತ್ತೇನೆ. ಆದ್ರೆ ತೆರೆಯ ಮೇಲೆ ಹೇಗೆ ಅವಳೊಂದಿಗೆ ರೊಮ್ಯಾನ್ಸ್ ಮಾಡಲು ಸಾಧ್ಯ. ಹೀಗಾಗಿ ಚಿತ್ರದ ನಾಯಕಿಯಾಗಿ ಅವಳ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದೇನೆಂದು ಹೇಳಿದ್ದರು.