Friday, 22nd November 2024

ಹೈದರಾಬಾದ್‌ನಿಂದ ರಾಹುಲ್ ಚುನಾವಣೆಗೆ ಸ್ಪರ್ಧಿಸಲಿ: ಓವೈಸಿ ಸವಾಲು

ಹೈದರಾಬಾದ್: ”ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನೀವು ಹೈದರಾಬಾದ್‌ನಿಂದ ಚುನಾವಣೆಗೆ ಸ್ಪರ್ಧಿಸಬೇಕೇ

ಹೊರತು ವಯನಾಡ್​ ಕ್ಷೇತ್ರದಿಂದ ಅಲ್ಲ” ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸವಾಲೆಸೆದರು.

ತೆಲಂಗಾಣದಲ್ಲಿ ಈ ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಹೆಚ್ಚು ಸೀಟುಗಳನ್ನು ಗೆದ್ದು ಅಧಿಕಾರದ ಚುಕ್ಕಾಣಿಗಾಗಿ ಎರಡೂ ಪಕ್ಷಗಳು ಹವಣಿಸುತ್ತಿದ್ದು, ಕಾಂಗ್ರೆಸ್ ಮತ್ತು ಎಐಎಂಐಎಂ ನಾಯಕರ ನಡುವೆ ವಾಕ್ಸಮರ ನಡೆಯುತ್ತಿದೆ.

ಈ ತಿಂಗಳ ಆರಂಭದಲ್ಲಿ ತೆಲಂಗಾಣದ ತುಕ್ಕುಗುಡದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ”ತೆಲಂಗಾಣದಲ್ಲಿ ಬಿಜೆಪಿ, ಬಿಆರ್‌ಎಸ್ ಮತ್ತು ಎಐಎಂಐಎಂ ಒಗ್ಗಟ್ಟಿ ನಿಂದ ಕೆಲಸ ಮಾಡುತ್ತಿವೆ. ಆದರೆ, ನಮ್ಮ ಪಕ್ಷವು ಈ ತ್ರಿಕೂಟದ ವಿರುದ್ಧ ಹೋರಾಡುತ್ತಿದೆ” ಎಂದಿದ್ದರು.

”ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಹಾಗೂ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ಯಾವುದೇ ಸಿಬಿಐ, ಇಡಿ ಪ್ರಕರಣಗಳಿಲ್ಲ. ಏಕೆಂದರೆ, ಪ್ರಧಾನಿ ನರೇಂದ್ರ ಮೋದಿ ಅವರನ್ನು ತಮ್ಮ ‘ಸ್ವಂತ ಜನರು’ ಎಂದು ಪರಿಗಣಿಸಿದ್ದಾರೆ” ಎಂದು ವ್ಯಂಗ್ಯವಾಡಿದ್ದರು.

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಲು ಎಲ್ಲಾ ರಾಜಕೀಯ ಪಕ್ಷಗಳು ರಣತಂತ್ರ ರೂಪಿಸುತ್ತಿವೆ. ಕಾಂಗ್ರೆಸ್ ಆರು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು, ಅಧಿಕಾರಕ್ಕೆ ಬಂದರೆ ಎಲ್ಲ ಭರವಸೆಗಳನ್ನೂ ಈಡೇರಿಸಲಾಗುವುದು ಎಂದು ಹೇಳಿದೆ.