ಬೆಂಗಳೂರು: ಬೆಂಗಳೂರು ಬಂದ್ ಹಾಗೂ ಸೆ.29ರಂದು ಕರೆ ನೀಡಿರುವಂತ ಕರ್ನಾಟಕ ಬಂದ್ ಸೇರಿದಂತೆ ನಾನು ಯಾವುದೇ ಬಂದ್ಗೆ ಬೆಂಬಲ ಕೊಡಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ ನಾರಾಯಣಗೌಡ ಸ್ಪಷ್ಟ ಪಡಿಸಿದ್ದಾರೆ.
ನಾನು ಯಾವುದೇ ಬಂದ್ಗೆ ಬೆಂಬಲ ಕೊಡಲ್ಲ. ಕನ್ನಡ ಭಾಷೆ, ನೆಲ, ಜಲದ ವಿಚಾರವಾಗಿ ನನ್ನ ಹೋರಾಟ ಮುಂದುವರಿಯುತ್ತೆ ಎಂದು ಹೇಳಿದ್ದಾರೆ.
ಬಂದ್ನಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತೆ. ದಿನಗೂಲಿ ನೌಕಕರಿಗೆ ಈ ಬಂದ್ನಿಂದ ತೊಂದರೆ ಆಗುತ್ತೆ. ಬಂದ್ ನಿಂದ ಕಾವೇರಿಯನ್ನ ಉಳಿಸಿ ಕೊಳ್ಳಲು ಆಗಲ್ಲ ಎಂಬುದಾಗಿ ತಿಳಿಸಿದ್ದಾರೆ.
ಬಂದ್ ಅಂದರೇ ಟೌನ್ ಹಾಲ್ನಿಂದ ಮೆರವಣಿಗೆ ಬರುವುದು ಅಷ್ಟೇನಾ? ಮಾತಿಗೆ ಮುಂಚೆ ಬಂದ್ ಒಂದೇ ಬ್ರಹ್ಮಾಸ್ತ್ರ ಆಗಬಾರದು. ರಾಜಕಾರಣಿಗಳನ್ನು ನಂಬಿಕೊಂಡು ಹೋರಾಟಕ್ಕೆ ಹೋಗಬಾರದು ಎಂದು ಹೇಳಿದರು.